Wednesday, October 27, 2021
spot_img
Homeರಾಜ್ಯಮೂರು ವಾರದೊಳಗೆ ಗ್ರಾಮ ಪಂಚಾಯತ್‌ ಚುನಾವಣೆ ದಿನಾಂಕ ಪ್ರಕಟಿಸಲು ಹೈಕೋರ್ಟ್‌ ಆದೇಶ

ಮೂರು ವಾರದೊಳಗೆ ಗ್ರಾಮ ಪಂಚಾಯತ್‌ ಚುನಾವಣೆ ದಿನಾಂಕ ಪ್ರಕಟಿಸಲು ಹೈಕೋರ್ಟ್‌ ಆದೇಶ

ಬೆಂಗಳೂರು, ನ.13: ಮೂರು ವಾರದಲ್ಲಿ ಗ್ರಾಮ ಪಂಚಾಯತ್‌ ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಶುಕ್ರವಾರ ಹೈಕೋರ್ಟ್‌ ನಿರ್ದೇಶನ ನೀಡಿದೆ.
ಅವಧಿ ಮುಗಿದಿರುವ ಗ್ರಾಮ ಪಂಚಾಯತ್‌ ಗಳಿಗೆ ಶೀಘ್ರ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ ಕೆ.ಸಿ. ಕೊಂಡಯ್ಯ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ‌ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರವು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಸಿಬ್ಬಂದಿಯ ಅಗತ್ಯವಿದ್ದರೆ ಚುನಾವಣಾ ಆಯೋಗ ರಾಜ್ಯಪಾಲರನ್ನು ಸಂಪರ್ಕಿಸಬಹುದು. ಆದರೆ ರಾಜ್ಯ ಸರ್ಕಾರವನ್ನಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದೂಡಬೇಕು ಎಂದು ರಾಜ್ಯ ಸರ್ಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ ಆಯೋಗ ತನ್ನ ವೇಳಾಪಟ್ಟಿಯ ಪ್ರಕಾರ, ಕೋವಿಡ್ ಮಾರ್ಗಸೂಚಿಗಳೊಂದಿಗೆ ಚುನಾವಣೆ ನಡೆಸುವ ನಿರ್ಧಾರ ತೆಗೆದುಕೊಂಡಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!