Wednesday, October 27, 2021
spot_img
Homeದೇಶಅರುಣದ್ವಯರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಹೊಣೆ

ಅರುಣದ್ವಯರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಹೊಣೆ

ದಿಲ್ಲಿ, ನ.14: ಕರ್ನಾಟಕದ ಹೊಣೆಯನ್ನು ಬಿಜೆಪಿ ಇಬ್ಬರು ಅರುಣರಿಗೆ ವಹಿಸಿದೆ. ನಿನ್ನೆ ರಾತ್ರಿ ಪ್ರಕಟಿಸಲಾದ ವಿವಿಧ ರಾಜ್ಯಗಳ ಪಕ್ಷ ಉಸ್ತುವಾರಿ ನಾಯಕರ ಪೈಕಿ ಅರುಣ್‌ ಸಿಂಗ್‌ ಅವರಿಗೆ ಕರ್ನಾಟಕ ರಾಜ್ಯದ ಉಸ್ತುವಾರಿಯನ್ನು ನೀಡಲಾಗಿದೆ. ಉಪ ಉಸ್ತುವಾರಿಯಾಗಿ ಡಿ.ಕೆ. ಅರುಣಾ ಅವರನ್ನು ನೇಮಿಸಲಾಗಿದೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಇತ್ತೀಚೆಗಷ್ಟೇ ನೇಮಕಗೊಂಡು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿ.ಟಿ. ರವಿ ಅವರಿಗೆ ತಮಿಳುನಾಡು, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಉಸ್ತುವಾರಿ ವಹಿಸಲಾಗಿದೆ.
ನಿರ್ಮಲಕುಮಾರ್‌ ಸುರಾನಾ ಅವರನ್ನು ನೆರೆಯ ಪುದುಚೇರಿಗೆ ನಿಯೋಜಿಸಲಾಗಿದೆ. ಇದುವರೆಗೆ ರಾಜ್ಯದ ಉಸ್ತುವಾರಿಯಾಗಿದ್ದ ಪಿ.ಮುರುಳೀಧರ ರಾವ್‌ ಅವರಿಗೆ ಮಧ್ಯಪ್ರದೇಶದ ಹೊಣೆ ವಹಿಸಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!