Sunday, October 17, 2021
spot_img
Homeರಾಜ್ಯಕೇಂದ್ರದ ಹೊಸ ಮಾರ್ಗಸೂಚಿ ಬಿಡುಗಡೆಯಾದ ಬಳಿಕ ಕಂಬಳಕ್ಕೆ ಅನುಮತಿ

ಕೇಂದ್ರದ ಹೊಸ ಮಾರ್ಗಸೂಚಿ ಬಿಡುಗಡೆಯಾದ ಬಳಿಕ ಕಂಬಳಕ್ಕೆ ಅನುಮತಿ

ಬೆಂಗಳೂರು, ನ.14 : ಕಂಬಳ ಪ್ರಿಯರು ಈ ಜನಪ್ರಿಯ ಜಾನಪದ ಕ್ರೀಡೆ ಶುರುವಾಗುವುದನ್ನು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಆದರೆ ಸರಕಾರ ಕಂಬಳಕ್ಕೆ ಅನುಮತಿ ನೀಡಲು ಮೀನಾಮೇಷ ಎಣಿಸುತ್ತಿದೆ.
ಇತ್ತೀಚೆಗೆ ಕಂಬಳ ಸಮಿತಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಂಬಳ ನಡೆಸಲು ಅನುಮತಿ ಕೊಡಬೇಕೆಂದು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮನವಿ ಸಲ್ಲಿಸಿತ್ತು. ಈ ಮನವಿಗೆ ಪ್ರತಿಸ್ಪಂದಿಸಿರುವ ಸಚಿವರು ಕೇಂದ್ರ ಸರಕಾರ ಹೊಸ ಕೊರೊನಾ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದ ಬಳಿಕ ಕಂಬಳಕ್ಕೆ ಅನುಮತಿ ನೀಡುವ ಕುರಿತು ನಿರ್ಧರಿಸಲಾಗುವುದು ಎಂದಿದ್ದಾರೆ. ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು ಅವರೂ ಕೇಂದ್ರದ ಹೊಸ ಮಾರ್ಗಸೂಚಿಯನ್ನು ಕಾದು ನೋಡೋಣ ಎಂದಿದ್ದಾರೆ.
ಕಂಬಳ ಸೇರಿದಂತೆ ಎಲ್ಲ ಸಾಂಸ್ಕೃತಿಕ ಚಟುವಟಿಕೆಗಳು ಆರಂಭವಾಗಬೇಕೆಂಬ ಇರಾದೆ ಸರಕಾರಕ್ಕೂ ಇದೆ. ಆದರೆ ಕೊರೊನಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿರುವುರಿಂದ ಹೊಸ ಮಾರ್ಗಸೂಚಿಯನ್ನು ಕಾದು ನೋಡಬೇಕಾಗಿದೆ ಎಂದು ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸದ್ಯದಲ್ಲೇ ಕೇಂದ್ರ ಸರಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದೆ. ಅದನ್ನು ನೋಡಿಕೊಂಡು ಕಂಬಳದ ಬಗ್ಗೆ ರಾಜ್ಯ ಸರಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ನಳಿನ್‌ಕುಮಾರ್‌ ಕಟೀಲು ತಿಳಿಸಿದ್ದಾರೆ.
ಕೊರೊನಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಲ್ಲ ಮುನ್ನೆಚ್ಚರಿಕೆಗಳನ್ನು ವಹಿಸಿಕೊಂಡು ಕಂಬಳ ನಡೆಸುತ್ತೇವೆ ಎಂದು ಕಂಬಳ ಸಮಿತಿ ಮನವಿಯಲ್ಲಿ ಭರವಸೆ ನೀಡಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!