Wednesday, October 27, 2021
spot_img
Homeದೇಶನಿತೀಶ್‌ ಕುಮಾರ್‌ ಸತತ ನಾಲ್ಕನೇ ಬಾರಿ ಬಿಹಾರ ಮುಖ್ಯಮಂತ್ರಿ;ಇಬ್ಬರು ಉಪಮುಖ್ಯಮಂತ್ರಿಗಳು

ನಿತೀಶ್‌ ಕುಮಾರ್‌ ಸತತ ನಾಲ್ಕನೇ ಬಾರಿ ಬಿಹಾರ ಮುಖ್ಯಮಂತ್ರಿ;ಇಬ್ಬರು ಉಪಮುಖ್ಯಮಂತ್ರಿಗಳು

ಪಾಟ್ನ, ನ.16 : ಬಿಹಾರದ ಮುಖ್ಯಮಂತ್ರಿಯಾಗಿ ಸತತ ನಾಲ್ಕನೇ ಅವಧಿಗೆ ನಿತೀಶ್‌ ಕುಮಾರ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ನಿತೀಶ್‌ ಕುಮಾರ್‌ ಮುಖ್ಯಮಂತ್ರಿಯಾಗುತ್ತಿರುವುದು ಇದು ಏಳನೇ ಸಲ. ಬಿಜೆಪಿ ನಾಯಕರಾದ ತಾರಕಿಶೋರ್‌ ಪ್ರಸಾದ್‌ ಮತ್ತು ರೇಣು ದೇವಿ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಫಗು ಚೌಹಾನ್‌ ಪ್ರತಿಜ್ಞಾ ವಿಧಿ ಬೋಧಿಸಿದರು.
ಬಿಜೆಪಿಯ ಹಿರಿಯ ನಾಯಕ ಸುಶೀಲ್‌ ಕುಮಾರ್‌ ಮೋದಿ ಪ್ರಮಾಣ ವಚನ ಸ್ವೀಕರಿಸಿಲ್ಲ. ಅವರಿಗೆ ಕೇಂದ್ರದಲ್ಲಿ ದೊಡ್ಡ ಹುದ್ದೆ ಸಿಗುವ ನಿರೀಕ್ಷೆಯಿದೆ.
ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್‌ ಶಾ ಸೇರಿ ಹಲವು ಗಣ್ಯರು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡರು. ವಿಪಕ್ಷ ಆರ್‌ ಜೆಡಿ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ಬಹಿಷ್ಕರಿಸಿತ್ತು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!