Tuesday, September 28, 2021
spot_img
Homeದೇಶಕೆ. ನಾರಾಯಣ ಬಿಜೆಪಿ ರಾಜ್ಯಸಭಾ ಅಭ್ಯರ್ಥಿ

ಕೆ. ನಾರಾಯಣ ಬಿಜೆಪಿ ರಾಜ್ಯಸಭಾ ಅಭ್ಯರ್ಥಿ

ದಿಲ್ಲಿ, ನ.17: ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಯವರ ನಿಧನದಿಂದ ತೆರವಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೊಷಣೆಯಾಗಿದೆ.
ಬಿಜೆಪಿ ರಾಜ್ಯಸಭಾ ಅಭ್ಯರ್ಥಿಯಾಗಿ ಪಕ್ಷದ ಕಾರ್ಯಕರ್ತರಾದ ಡಾ. ಕೆ. ನಾರಾಯಣ್ ಆಯ್ಕೆಯಾಗಿದ್ದಾರೆ. ಇವರು ಮೂಲತಂ ಮಂಗಳೂರಿನವರು.
ರಾಜ್ಯಸಭಾ ಸ್ಥಾನಕ್ಕಾಗಿ ಡಿ.1ರಂದು ಚುನಾವಣೆ ನಡೆಯಲಿದ್ದು ನವೆಂಬರ್ 18ಕ್ಕೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ.ಇಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಕೆ. ನಾರಾಯಣ ಅವರ ಹೆಸರನ್ನು ಘೋಷಿಸಿದೆ.
ವಿಶೇಷವೆಂದರೆ ಕಳೆದ ಬಾರಿ ಕೂಡ ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿತ್ತು. ಈ ಬಾರಿ ಕೂಡ ನಿಷ್ಟಾವಂತ ಕಾರ್ಯಕರ್ತರಿಗೆ ಮತ್ತೆ ಮಣೆ ಹಾಕಿದೆ.
ಕೆ. ನಾರಾಯಣ ಆಯ್ಕೆಯ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಮತ್ತೊಮ್ಮೆ ಶಾಕ್ ಕೊಟ್ಟಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!