Tuesday, September 28, 2021
spot_img
Homeಕ್ರೈಂಡಿ.ಜೆ. ಹಳ್ಳಿ ಗಲಭೆ ಪ್ರಕರಣ : ತಲೆಮರೆಸಿಕೊಂಡಿದ್ದ ಸಂಪತ್‌ ರಾಜ್‌ ಬಂಧನ

ಡಿ.ಜೆ. ಹಳ್ಳಿ ಗಲಭೆ ಪ್ರಕರಣ : ತಲೆಮರೆಸಿಕೊಂಡಿದ್ದ ಸಂಪತ್‌ ರಾಜ್‌ ಬಂಧನ


ಬೆಂಗಳೂರು,ನ. 17: ಇತ್ತೀಚೆಗೆ ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ಸಂಭವಿಸಿದ ಭೀಕರ ದೊಂಬಿ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಸುಟ್ಟ ಪ್ರಕರಣದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಹಳ ದಿನಗಳಿಂದ ತಲೆ ಮರೆಸಿಕೊಂಡಿದ್ದ ಸಂಪತ್ ರಾಜ್ ಸೆರೆಗಾಗಿ ಸಿಸಿಬಿ ಐದು ತಂಡಗಳನ್ನು ರಚಿಸಿತ್ತು. ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಲ್ಲೂ ಕೂಡಾ ಸಂಪತ್ ರಾಜ್ ಗಾಗಿ ಹುಡುಕಾಟ ನಡೆಸಲಾಗಿತ್ತು.
ಮಂಗಳವಾರವಷ್ಟೇ ಸಂಪತ್ ರಾಜ್ ಆಪ್ತ ರಿಯಾಜುದ್ದೀನ್ ರನ್ನು ಸಿಸಿಬಿ ಪೊಲೀಸರು ಬಂಧಿಸಿ ಆತ ನೀಡಿದ ಸುಳಿವಿನ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರ ಬಲೆಗೆ ಸಂಪತ್ ರಾಜ್ ಬಿದ್ದಿದ್ದು, ಅಂತಿಮವಾಗಿ ಅವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ವಿವಾದಿತ ಫೇಸ್‌ ಬುಕ್‌ ಪೋಸ್ಟ್ ವೊಂದಕ್ಕೆ ಸಂಬಂಧಿಸಿದಂತೆ ಆಗಸ್ಟ್ 11 ರಂದು ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಭೆ ಸೃಷ್ಟಿಯಾಗಿತ್ತು. ಏಕಾಏಕಿ ಜಮಾಯಿಸಿದ್ದ ನೂರಾರು ಮಂದಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಅವರ ಸಹೋದರಿಯ ಮನೆಯ ಮೇಲೆ ದಾಳಿ ನಡೆಸಿದ್ದರು. ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯ ಮೇಲೂ ದಾಳಿ ನಡೆಸಿ ಧ್ವಂಸಗೊಳಿಸಿದ್ದರು. ಈ ವೇಳೆ ಸಾಕಷ್ಟು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಈ ವರೆಗೂ 421 ಮಂದಿಯನ್ನು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!