Friday, September 24, 2021
spot_img
Homeರಾಜ್ಯಪೇಟೆ ರೌಡಿ ರೀತಿ ಮಾತು: ಪ್ರತಾಪ್‌ ಸಿಂಹಗೆ ಸುಮಲತಾ ತಿರುಗೇಟು

ಪೇಟೆ ರೌಡಿ ರೀತಿ ಮಾತು: ಪ್ರತಾಪ್‌ ಸಿಂಹಗೆ ಸುಮಲತಾ ತಿರುಗೇಟು

ಬೆಂಗಳೂರು, ನ. 17:ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸಂಸದ ಪ್ರತಾಪ್‌ ಸಿಂಹ ಅವರು ತನ್ನ ಕುರಿತು ಮಾಡಿದ್ದ ಟೀಕೆಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಿರುಗೇಟು ನೀಡಿದ್ದಾರೆ.
ಪ್ರತಾಪ್‌ ಸಿಂಹ ಅವರನ್ನು ಪೇಟೆ ರೌಡಿಗೆ ಹೋಲಿಕೆ ಮಾಡಿ ಸುಮಲತಾ ಅವರು ಮಾತನಾಡಿದ್ದಾರೆ. ಪ್ರತಾಪ್‌ಸಿಂಹ ಅವರು ನಮ್ಮ ಕ್ಷೇತ್ರದ ಪಕ್ಕದ ಕ್ಷೇತ್ರದ ಸಂಸದರು. ಅವರು ಎರಡು ಬಾರಿ ಸಂಸದರಾಗಿದ್ದಾರೆ. ಅದನ್ನು ಅರಿತು ಮಾತನಾಡಬೇಕಾಗುತ್ತದೆ. ಪೇಟೆ ರೌಡಿಯ ತರಹ ಅವರು ಮಾತನಾಡಬಾರದು ಎಂದು ತಿರುಗೇಟು ನೀಡಿದ್ದಾರೆ.
ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಏನೆಲ್ಲಾ ಅಭಿವೃದ್ಧಿ ಆಗಿದೆ ಎಂದು ನನಗೂ ಗೊತ್ತಿದೆ. ಕೊಡಗು ಭಾಗಗಳಲ್ಲಿ ರಸ್ತೆಗಳು ಕೊಚ್ಚಿ ಹೋಗಿರುವುದರ ಬಗ್ಗೆ ನನಗೂ ದೂರುಗಳು ಬಂದಿವೆ. ಅಂಬರೀಶ್ ಇದ್ದಾಗ ಯಾರಿಗೂ ಮಾತನಾಡುವ ಧೈರ್ಯ ಇರಲಿಲ್ಲ. ಅಂಬರೀಶ್ ಇದ್ದಾಗ ಇಂತಹ ಮಾತುಗಳನ್ನು ಯಾರೂ ಆಡುತ್ತಿರಲಿಲ್ಲ. ಇಂದು‌ ಅಂಬರೀಶ್ ಇಲ್ಲ. ಹೀಗಾಗಿ, ಅವರೆಲ್ಲಾ ಮಾತನ್ನಾಡುತ್ತಿದ್ದಾರೆ ಎಂದು ಸುಮಲತಾ ಹೇಳಿಕೆ ನೀಡಿದ್ದಾರೆ.
ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ. ಮಂಡ್ಯದ ಯಾವುದೇ ಕೆಲಸ ಇದ್ದರೂ ನನಗೆ ಹೇಳಿ. ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದವರನ್ನು ಸೋಲಿಸಲು ಸುಮಲತಾ ಅವರನ್ನು ಗೆಲ್ಲಿಸಿದ್ದಾರೆ ಅಷ್ಟೇ ಎಂದು ಬೆಂಗಳೂರು-ಮೈಸೂರು ಹತ್ತು ಪಥಗಳ ರಸ್ತೆ ಕಾಮಗಾರಿಯ ಬಗ್ಗೆ ಅಧಿಕಾರಿಯೊಬ್ಬರ ಜೊತೆ ದೂರವಾಣಿಯಲ್ಲಿ ಮಾತನಾಡುವಾಗ ಪ್ರತಾಪ್ ಸಿಂಹ ಹೇಳಿದ್ದರು.ಈ ಆಡಿಯೋ ವೈರಲ್ ಆಗಿತ್ತು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!