ರಾಜಾಪುರ ಸಾರಸ್ವತ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ ಅತ್ಯುತ್ತಮ ಸಹಕಾರಿ ಸಂಸ್ಥೆ ಪ್ರಶಸ್ತಿ

0

ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ 67ನೇ ಸಹಕಾರಿ ಸಪ್ತಾಹದಲ್ಲಿ ಕಾರ್ಕಳದ ರಾಜಾಪುರ ಸಾರಸ್ವತ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಗೆ ಅತ್ಯುತ್ತಮ ಸಹಕಾರಿ ಸಂಸ್ಥೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್‌, ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ರಾಜಾಪುರ ಸಾರಸ್ವತ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು, ಸಿಇಒ ಸುರೇಂದ್ರ ನಾಯಕ್‌ ಅವರನ್ನು ಸನ್ಮಾನಿಸಿದರು. ಶಾಸಕ ವೇದವ್ಯಾಸ ಕಾಮತ್‌, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್‌. ರಾಜೇಂದ್ರ ಕುಮಾರ್‌, ಸಹಕಾರಿ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Previous articleಕಾಲೇಜು ಜೀವನ-ಮರೆಯಲಾಗದ ಪಯಣ
Next articleಕಾನೂನು ಕಣಜ – ಕೌಟುಂಬಿಕ ದೌರ್ಜನ್ಯ ವಿರುದ್ಧ ಮಹಿಳೆಯರಿಗಿರುವ ರಕ್ಷಣೆ

LEAVE A REPLY

Please enter your comment!
Please enter your name here