ಕೊಂಕಣ ರೈಲ್ವೇ ನಿಗಮ ಟೆಕ್ನಿಶೀಯನ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ನವೆಂಬರ್ 27, 2020 ಕೊನೆ ದಿನಾಂಕವಾಗಿದೆ. ಈ ನೇಮಕಾತಿ ಮೂಲಕ 58 ಟೆಕ್ನೀಷಿಯನ್ ಪೋಸ್ಟ್‌ಗಳನ್ನು ನೇಮಕ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ 28-10-2020
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ 27-11-2020
ವಿದ್ಯಾರ್ಹತೆ
ಟೆಕ್ನೀಷಿಯನ್ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್ (ಎಸ್‌ಎಸ್‌ಎಲ್‌ಸಿ) ಜತೆಗೆ ಐಟಿಐ ವಿದ್ಯಾರ್ಹತೆಯನ್ನು ಇಲೆಕ್ಟ್ರೀಷಿಯನ್, ವಯರ್‌ಮ್ಯಾನ್, ಮೆಕ್ಯಾನಿಕ್ ಹೆಚ್‌ಟಿ, ಎಲ್‌ಟಿ ಈಕ್ವಿಪ್‌ಮೆಂಟ್, ಕೇಬಲ್ ಜಾಯಿಂಟಿಂಗ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ಟ್ರೇಡ್‌ಗಳಲ್ಲಿ ಪಡೆದಿರಬೇಕು.
ವಯೋಮಿತಿ
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 33 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಆಯ್ಕೆವಿಧಾನ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಜೊತೆಗೆ ಮೆಡಿಕಲ್ ಟೆಸ್ಟ್ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ
- ಸಾಮಾನ್ಯ ಅಭ್ಯರ್ಥಿಗಳಿಗೆ ರೂ.500.
- ಎಸ್‌ಸಿ / ಎಸ್‌ಟಿ / ಒಬಿಸಿ / ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.250.
ನೆನಪಿಡಬೇಕಾದ ದಿನಾಂಕಗಳು
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ: 28-10-2020
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ: 27-11-2020
website : konkanrailway.com








































