ಬೆಂಗಳೂರು, ನ.19 :ಇತ್ತೀಚೆಗಷ್ಟೇ ನಗರ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆದು ಅಧಿಕಾರ ಸ್ವೀಕಾರ ಆಗಿದೆ. ಆದರೆ ಗೆದ್ದ ಬಳಿಕ ಹಾಕಿದ ಹಾರದ ಪರಿಮಳ ಮಾಸುವ ಮೊದಲೇ ಹೈಕೋರ್ಟ್ ದೊಡ್ಡದೊಂದು ಶಾಕ್ ನೀಡಿದೆ. ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಪಡಿಸಿ ಸರಕಾರ ಅ.8ರಂದು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಇದರಿಂದಾಗಿ ಸರಕಾರದ ಆದೇಶದ ಪ್ರಕಾರ ಚುನಾವಣೆ ನಡೆದು ಅಧಿಕಾರ ವಹಿಸಿಕೊಂಡವರು ಅತಂತ್ರ ಸ್ಥಿತಿಯಲ್ಲಿ ಸಿಲುಕಿದಂತಾಗಿದೆ.
ಹೈಕೋರ್ಟ್ ನ ಏಕಸದಸ್ಯ ಪೀಠ ಸರಕಾರದ ಆದೇಶವನ್ನು ರದ್ದುಪಡಿಸಿ ಇಂದು ಆದೇಶ ಹೊರಡಿಸಿದ್ದು, ಮೇಲ್ಮನವಿ ಸಲ್ಲಿಸಲು ಸರಕಾರಕ್ಕೆ ಹತ್ತು ದಿನಗಳ ಕಾಲಾವಕಾಶ ನೀಡಿದೆ. ಒಟ್ಟು 277 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ನಿಗದಿಪಡಿಸಿ ಅ.8 ರಂದು ಅಧಿಸೂಚನೆ ಹೊರಡಿಸಿತ್ತು.
ಪುರಸಭೆ, ಪ.ಪಂ.ಅಧ್ಯಕ್ಷ- ಉಪಾಧ್ಯಕ್ಷ ಮೀಸಲಾತಿ ರದ್ದುಪಡಿಸಿದ ಹೈಕೋರ್ಟ್








































