Wednesday, October 27, 2021
spot_img
Homeದೇಶಜಮ್ಮುವಿನಲ್ಲಿ ನಾಲ್ವರು ಉಗ್ರರ ಹತ್ಯೆ

ಜಮ್ಮುವಿನಲ್ಲಿ ನಾಲ್ವರು ಉಗ್ರರ ಹತ್ಯೆ

ಜಮ್ಮುನ.19 : ಜಮ್ಮುವಿನ ನಾಗ್ರೋಟಾದ ಬಳಿಯ ಬಾನ್ ಟೋಲ್ ಪ್ಲಾಜಾ ಬಳಿ ಇಂದು ಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.
ಈ ಪ್ರದೇಶದಲ್ಲಿ ಉಗ್ರರು ಅಡಗಿದ್ದ ಶಂಕೆ ಮೇರೆಗೆ ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಕೆಲವು ಗಂಟೆಗಳ ಕಾಲ ಮುಚ್ಚಿ ಕಾರ್ಯಾಚರಣೆ ನಡೆಸಲಾಯಿತು.
ಬಾನ್ ಟೋಲ್ ಪ್ಲಾಜಾ ಬಳಿ ಭದ್ರತಾ ಪಡೆಗಳು ನಾಕಾ ಬಂದಿ ಹಾಕಿ, ವಾಹನಗಳ ತಪಾಸಣೆ ನಡೆಸುವಾಗ ಉಗ್ರರ ಗುಂಪೊಂದು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿ, ಅರಣ್ಯದತ್ತ ಓಡಿದ್ದಾರೆ. ತಕ್ಷಣವೇ ಬೆಳಗ್ಗೆ 5 ಗಂಟೆ ಸಮಯದಲ್ಲಿ ಎನ್ ಕೌಂಟರ್ ಆರಂಭಿಸಲಾಗಿದೆ.
ಗುಂಡಿನ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಭದ್ರತಾ ಪಡೆಯಲ್ಲಿದ್ದ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರು ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!