ಬೆಂಗಳೂರು, ನ.20 : ಕರ್ನಾಟಕದಲ್ಲೂ ಕಟ್ಟುನಿಟ್ಟಿನ ಗೋ ಹತ್ಯಾ ನಿಷೇಧ ಕಾನೂನು ಜಾರಿಗೆ ಬರಲಿದೆ. ಮುಂದಿನ ಅಧಿವೇಶನದಲ್ಲೇ ಹೊಸ ಕಾನೂನು ಮಂಜೂರಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.
ಕರ್ನಾಟಕದಲ್ಲಿ ಗೋ ಹತ್ಯಾ ನಿಷೇಧ ಕಾನೂನು ಸದ್ಯದಲ್ಲೇ ಜಾರಿಯಾಗಲಿದೆ.

ಕರ್ನಾಟಕ ಗೋ ಸಂರಕ್ಷಣೆ ಮತ್ತು ಹತ್ಯಾ ನಿಷೇಧ ಮಸೂದೆಯನ್ನು ಸಂಪುಟ ಸಭೆಯಲ್ಲಿ ಅನುಮೋದಿಸಿ ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸುವಂತೆ ಪಶು ಸಂಗೋಪನಾ ಸಚಿವ ಪ್ರಭು ಚವಾಣ್ ಅವರಿಗೆ ಮನವಿ ಹೇಳಿದ್ದೇನೆ ಎಂದು ಸಿ. ಟಿ. ರವಿ ಟ್ವೀಟ್ ಮಾಡಿದ್ದಾರೆ.





















