ಹಿಂದುಳಿದ ವರ್ಗಗಳ ಆಯೋಗದ ರಾಜ್ಯಾಧ್ಯಕ್ಷರಾಗಿ ಕೆ. ಜಯಪ್ರಕಾಶ್ ಹೆಗ್ಡೆ ನೇಮಕ

ಬೆಂಗಳೂರು, ನ. 23: ಮಾಜಿ ಸಚಿವ ಹಾಗೂ ಸಂಸದ ಜಯಪ್ರಕಾಶ್ ಹೆಗ್ಡೆ ಅವರನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ‌.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧಿನಿಯಮ 1995ರ ಪರಿಚ್ಛೇದ 3 ಮತ್ತು 4(1) ಅಡಿಯಲ್ಲಿ ದತ್ತವಾದ ಅಧಿಕಾರದನ್ವಯ ಕರ್ನಾಟಕ‌ ಸರಕಾರ ಕೆ. ಜಯಪ್ರಕಾಶ್ ಹೆಗ್ಡೆ ಅವರಿಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಾರಿಗೆ ಬರುವಂತೆ ನೇಮಿಸಿದೆ.‌
ಮೂರು ಬಾರಿ‌ ಶಾಸಕರಾಗಿ, ಮೀನುಗಾರಿಕಾ ಸಚಿವರಾಗಿ , ಉಡುಪಿ – ಚಿಕ್ಕಮಗಳೂರು ಸಂಸದರಾಗಿದ್ದ ಕೆ. ಜಯಪ್ರಕಾಶ್ ಹೆಗ್ಡೆ ಕಳೆದ ಕೆಲ ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.ಬಿಜೆಪಿಯಲ್ಲಿ ಅವರು ಮೂಲೆಗುಂಪಾಗಿದ್ದಾರೆ ಎಂಬ ಭಾವನೆ ಇತ್ತು.





























































































































error: Content is protected !!
Scroll to Top