ಕರ್ನಾಟಕ ಅಂಚೆ ವೃತ್ತದಲ್ಲಿ ಪೋಸ್ಟಲ್ ಅಸಿಸ್ಟೆಂಟ್, ಸ್ಟೋರಿಂಗ್ ಅಸಿಸ್ಟೆಂಟ್ ಸೇರಿ ಒಟ್ಟು 52 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.ಆಸಕ್ತ ಅಭ್ಯರ್ಥಿಗಳು ನ. 30ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್‌ನಿಂದ 12ನೇ ತರಗತಿ ಉತ್ತೀರ್ಣರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ 20 ರಿಂದ 25 ಸಾವಿರ ರೂ. ತನಕ ವೇತನ ನಿಗದಿಗೊಳಿಸಲಾಗಿದೆ.
ವಯೋಮಿತಿ
30 ವರ್ಷ ಮೀರಿರಬಾರದು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 20 ಡಿಸೆಂಬರ್ 2020ರಂದು ಲಿಖಿತ ಪರೀಕ್ಷೆ ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಜೊತೆ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ವಿಳಾಸ
cpmgre@gmail.com
rectt.ka@indiapost.gov.in
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್‌ಗೆ ಭೇಟಿ ನೀಡಿ : https://karnatakapost.gov.in/
ಕೊನೆಯ ದಿನಾಂಕ : 30-11-2020






































































