ಬೆಂಗಳೂರು, ನ.26: ಈಡಿಗ ಸಮುದಾಯದ ಅಭಿವೃದ್ಧಿಗಾಗಿ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರದಲ್ಲಿ ಗುತ್ತೇದಾರ್ ರಾಜ್ಯದಲ್ಲಿ ಸುಮಾರು 80 ಲಕ್ಷ ಈಡಿಗ ಸಮುದಾಯದ ಜನರಿದ್ದು, ಆವರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದಿದ್ದಾರೆ. ಶೇಂದಿ ಇಳಿಸುವುದನ್ನು ನಿಷೇಧಿಸಿದ ಬಳಿಕ ಈಡಿಗ ಸಮುದಾಯದ ಅನೇಕ ಮಂದಿ ನಿರುದ್ಯೋಗಿಗಳಾಗಿದ್ದಾರೆ. ಹೀಗಾಗಿ ಅವರ ಅಭಿವೃದ್ಧಿಗೆ ನಿಗಮ ಸ್ಥಾಪಿಸಿ 400 ಕೋ. ರೂ. ಅನುದಾನ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯ








































