ಬೆಂಗಳೂರು, ನ.30 : ರಾಜ್ಯ ಚುನಾವಣಾ ಆಯೋಗ ಇಂದು ಪಂಚಾಯತ್ ಚುನಾವಣೆ ದಿನಾಂಕ ಪ್ರಕಟಿಸಿದೆ. ಚುನಾವಣೆ ದಿನಾಂಕ ಪ್ರಕಟವಾದ ಬೆನ್ನಿಗೆ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಡಿ. 31ರ ತನಕ ಜಾರಿಯಲ್ಲಿರುತ್ತದೆ. ಮೊದಲ ಹಂತದ ಚುನಾವಣೆ ಡಿ.22 ರಂದು ಮತ್ತು ಎರಡನೇ ಹಂತದ ಚುನಾವಣೆ ಡಿ.27 ರಂದು ನಡೆದು ಡಿ.30 ರಂದು ಮತ ಎಣಿಕೆ ನಡೆಯಲಿದೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಎಲ್ಲ ಶಂಕುಸ್ಥಾಪನೆ, ಉದ್ಘಾಟನೆ ಮತ್ತಿತರ ಸರಕಾರಿ ಕಾರ್ಯಕ್ರಮಗಳಿಗೆ ತಡೆ ಬಿದ್ದಿದೆ.
ಪ್ರತಿ ಜಿಲ್ಲೆಯಲ್ಲಿ ಎರಡು ಹಂತದ ಮತದಾನ
ಪ್ರತಿ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಮತದಾನ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ. ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ.
5762 ಪಂಚಾಯತ್
ರಾಜ್ಯದಲ್ಲಿ ಒಟ್ಟು 5762 ಪಂಚಾಯತ್ ಗಳಿದ್ದು, 92,121 ಸದಸ್ಯ ಕ್ಷೇತ್ರಗಳಿವೆ.ಬೀದರ್ ಜಿಲ್ಲೆಯಲ್ಲಿ ಮತಯಂತ್ರ ಬಳಸಲಾಗುವುದು, ಉಳಿದೆಡೆ ಮತಪತ್ರದ ಮೂಲಕ ಮತದಾನ ಮಾಡಲಾಗುವುದು.
ತ್ರಿಕೋನ ಸ್ಪರ್ಧೆ
ಬಹುತೇಕ ಜಿಲ್ಲೆಗಳಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ನಡೆಯಲಿದೆ. ಬಿಜೆಪಿ ಈಗಾಗಲೇ ಪಂಚಾಯತ್ ಚುನಾವಣೆಗೆ ಭರದ ಸಿದ್ಧತೆ ನಡೆಸಿದೆ. ಕಾಂಗ್ರೆಸ್‌ನಲ್ಲೂ ತಯಾರಿ ಪ್ರಾರಂಭವಾಗಿದೆ. ಜೆಡಿಎಸ್ ತನ್ನ ಪ್ರಾಬಲ್ಯವಿರುವ ಜಿಲ್ಲೆಗಳತ್ತ ಹೆಚ್ಚು ಗಮನ ಹರಿಸಿದೆ.
ಗ್ರಾಮ ಪಂಚಾಯತ್ ಚುನಾವಣೆ : ಇಂದಿನಿಂದಲೆ ನೀತಿ ಸಂಹಿತೆ ಜಾರಿ
ಡಿ.30ರಂದು ಮತ ಎಣಿಕೆ
Recent Comments
ಕಗ್ಗದ ಸಂದೇಶ
on
https://youtu.be/47zKJ8cyugc