ಕಾರ್ಕಳ, ಡಿ.3 : ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾರ್ಕಳ ತಾಲೂಕಿನ ಎಲ್ಲ 34 ಗ್ರಾಮ ಪಂಚಾಯತುಗಳಲ್ಲೂ ಬಿಜೆಪಿ ಗೆಲ್ಲಲು ಶ್ರಮಿಸಬೇಕೆಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಗ್ರಾಮ ಪಂಚಾಯತ್ ಚುನಾವಣೆ ಪೂರ್ವಭಾವಿಯಾಗಿ ಶಾಸಕರ ಕಚೇರಿಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಯುವ ಮೋರ್ಚಾದ ಪಾತ್ರ ಮಹತ್ವದ್ದು. ಯೋವ ಮೋರ್ಚಾ ಸಕ್ರಿಯವಾಗಿ ಚುನಾವಣೆ ಕಣದಲ್ಲಿದ್ದು 34ಕ್ಕೆ 34 ಗ್ರಾಮ ಪಂಚಾಯತ್‌ಗಳನ್ನು ಗೆಲ್ಲುವ ನಿಟ್ಟಿನಲ್ಲಿ ಪ್ರಯತ್ನಿಸಬೇಕೆಂದು ಸುನೀಲ್ ಕುಮಾರ್ ಹೇಳಿದರು. ಕಾರ್ಕಳ ಯುವ ಮೋರ್ಚಾ ಅಧ್ಯಕ್ಷ ಮುಟ್ಲುಪಾಡಿ ಸುಹಾಸ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗಡೆ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ಕಾರ್ಕಳ, ಮಂಡಲ ಪ್ರಧಾನ ಕಾರ್ಯದರ್ಶಿ ನವೀನ್ ನಾಯಕ್, ಜಯರಾಮ್ ಸಾಲಿಯಾನ್, ಜಿಲ್ಲಾ ಯುವ ಮೋರ್ಚಾ ಪ್ರಭಾರಿ ರವೀಂದ್ರ ಮಡಿವಾಳ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭರತ್ ಕುಮಾರ್ ಜೈನ್, ಪ್ರಭಾರಿ ಕರುಣಾಕರ ಕೋಟ್ಯಾನ್ ಉಪಸ್ಥಿತರಿದ್ದರು.




















