ಬಂದ್‌ ಅಗತ್ಯವಿಲ್ಲ : ಯಡಿಯೂರಪ್ಪ ಖಡಕ್‌ ಮಾತು

ಬೆಂಗಳೂರು, ಡಿ.4 : ಮರಾಠ ಅಭಿವೃದ್ದಿ ನಿಗಮ ಸ್ಥಾಪನೆ ವಿರೋಧಿಸಿ ಕೆಲವು ಸಂಘಟನೆಗಳು ಶನಿವಾರ ರಾಜ್ಯ ಬಂದ್‌ ಮಾಡಲು ಹೊರಟಿರುವುದು ಸರಿಯಲ್ಲ, ಈಗ ಬಂದ್‌ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಬಂದ್ ಮಾಡಿ ಜನರಿಗೆ ತೊಂದರೆ ಕೊಡಬೇಡಿ. ಬಂದ್ ನಡೆಸುವ ಅಗತ್ಯ ಇಲ್ಲ. ಎಲ್ಲ ಸಮಾಜವನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಪ್ರಯತ್ನ ಮಾಡುತ್ತೇನೆ. ಬಂದ್‌ ಕೈಬಿಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕನ್ನಡ ಪರ ಸಂಘಟನೆಗಳ ಮುಖಂಡರಲ್ಲಿ ಮನವಿ ಮಾಡಿದ್ದಾರೆ.
ಕನ್ನಡಕ್ಕಾಗಿ ಏನೇನು ಆದ್ಯತೆ ಕೊಡಬೇಕು ಅದನ್ನು ಕೊಟ್ಟಿದ್ದೇನೆ, ಇನ್ನು ಏನು ಮಾಡಬೇಕು ಅದನ್ನು ಮಾಡಲು ಸಿದ್ಧನಿದ್ದೇನೆ ಎಂಬ ಭರವಸೆಯನ್ನು ನೀಡಿದರು. ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿರುವ ಬಂದ್‌ಗೆ ರಾಜ್ಯದಲ್ಲಿ ಅವಕಾಶ ಇಲ್ಲ.
ಬಂದ್ ಮಾಡಿದರೆ ಜನರಿಗೆ, ನಿತ್ಯ ಚಟುವಟಿಕೆಗಳಿಗೆ ಸಾಕಷ್ಟು ತೊಂದರೆಯಾಗುತ್ತದೆ ಎಂದಿದ್ದಾರೆ.















































































error: Content is protected !!
Scroll to Top