ಗುಡ್ಡೆಯಂಗಡಿ ಫ್ರೆಂಡ್ಸ್‌ : ರಕ್ತದಾನ ಶಿಬಿರ ಸಂಪನ್ನ

ಕಾರ್ಕಳ, ಡಿ.7: ಗುಡ್ಡೆಯಂಗಡಿ ಫ್ರೆಂಡ್ಸ್ ಕಾರ್ಕಳ ಮತ್ತು ನಿಟ್ಟೆ ಗಾಜ್ರಿಯಾ ಆಸ್ಪತ್ರೆ ಸಹಯೋಗದಲ್ಲಿ ರಕ್ತನಿಧಿ ಘಟಕ, ಅಜ್ಜರಕಾಡು ಉಡುಪಿ ಇವರ ಸಹಕಾರದೊಂದಿಗೆ ರಕ್ತದಾನ ಶಿಬಿರವು ಗಾಜ್ರಿಯಾ ಆಸ್ಪತ್ರೆಯಲ್ಲಿ ಭಾನುವಾರ ನಡೆಯಿತು.
ಶಿಬಿರವನ್ನು ಗಾಜ್ರಿಯಾ ಆಸ್ಪತ್ರೆಯ ನಿರ್ದೇಶಕ ಡಾ. ಸಚ್ಚಿದಾನಂದ ಪ್ರಭು ಉದ್ಘಾಟಿಸಿ ರಕ್ತದಾನದ ಮಹತ್ವವನ್ನು ತಿಳಿಸಿದರು.
ಕರ್ನಾಟಕ ಗೇರು ನಿಗಮದ ಅಧ್ಯಕ್ಷ ಬಿ. ಮಣಿರಾಜ್ ಶೆಟ್ಟಿ, ಪುರಸಭೆಯ ಅಧ್ಯಕ್ಷೆ ಸುಮಾ ಕೇಶವ್, ಜಿಲ್ಲಾ ರಕ್ತದಾನ ನಿಧಿ ಕೇಂದ್ರದ ಮುಖ್ಯಸ್ಥೆ ಡಾ. ವೀಣಾ, ಪುರಸಭಾ ಸದಸ್ಯೆ ಭಾರತಿ ಅಮೀನ್, ಗುಡ್ಡೆಯಂಗಡಿ ಫ್ರೆಂಡ್ಸ್ ಸ್ಥಾಪಕ ಅಧ್ಯಕ್ಷ ವಿಜಯ್ ಸಪಲಿಗ ಉಪಸ್ಥಿತರಿದ್ದರು.
ಶಿಬಿರದಲ್ಲಿ ಸ್ವಚ್ಛ ಕಾರ್ಕಳ ಬ್ರಿಗೇಡ್, ವಿನಾಯಕ ಫ್ರೆಂಡ್ಸ್ ಕಾರ್ಕಳ, ಆಟೋರಿಕ್ಷಾ ಚಾಲಕ ಮಾಲಕ ಸಂಘ ಕಾರ್ಕಳ ಹಾಗೂ ಮಹಿಳೆಯರು ಸೇರಿದಂತೆ 90ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಸನ್ಮಾನ
ಈಸಂದರ್ಭದಲ್ಲಿ ರಾಜ್ಯದಲ್ಲಿಯೇ ದಾಖಲೆ ಮಟ್ಟದ ರಕ್ತ ಸಂಗ್ರಹ ಮಾಡಿದ ಉಡುಪಿ ರಕ್ತನಿದಿ ಕೇಂದ್ರ ಮುಖ್ಯ ವೈದಾಧಿಕಾರಿ ಡಾ.ವೀಣಾ, ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಮಣಿರಾಜ್ ಶೆಟ್ಟಿ ಮತ್ತು ಕಾರ್ಕಳ ಪುರಸಭಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸುಮಾ ಕೇಶವ್ ಅವರನ್ನು ಈ ಸಂದರ್ಭದಲ್ಲಿ ಸಮ್ಮಾನಿಸಲಾಯಿತು. ಗಾಜ್ರಿಯಾ ಆಸ್ಪತ್ರೆಯ ಪ್ರಬಂಧಕ ಸುಧಾಕರ್ ಕಾರ್ಯಕ್ರಮ, ನಿರೂಪಿಸಿ, ಗುಡ್ಡೆಯಂಗಡಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಸುಕೇಶ್ ಶೆಟ್ಟಿ ಸ್ವಾಗತಿಸಿದರು.









































error: Content is protected !!
Scroll to Top