ದೇಶಾದ್ಯಂತ 24 ಗಂಟೆಗಳಲ್ಲಿ 32,080 ಸೋಂಕು ಪ್ರಕರಣಗಳು ದಾಖಲು, 82 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 32,080 ಹೊಸ ಸೋಂಕು ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತದ ಒಟ್ಟಾರೆ ಸೋಂಕಿತರ ಸಂಖ್ಯೆ 97 ಲಕ್ಷ ಗಡಿ ದಾಟಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು ಕಳೆದ 24 ಗಂಟೆಗಳ ಅವಧಿಲ್ಲಿ ದೇಶಾದ್ಯಂತ 32,080 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 97,35,850ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ದೇಶಾದ್ಯಂತ 402 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,41,360ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 36,635 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 92,15,581ಕ್ಕೆ ಏರಿಕೆಯಾಗಿದೆ. ಅಂತೆಯೇ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 3,78,909ಕ್ಕೆ ಕುಸಿದಿದೆ.









































































































error: Content is protected !!
Scroll to Top