ಕಾರ್ಕಳ : ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರ್ಕಳ, ವಿಜೇತ ವಸತಿಯುತ ವಿಶೇಷ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ವಿಜೇತ ವಸತಿಯುತ ವಿಶೇಷ ಶಾಲೆಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯಂಗವಾಗಿ ಡಿ. 15ರಂದು ವಿಕಲಚೇತನರ ಸಬಲೀಕರಣ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು. ಪ್ರಧಾನ ಸಿವಿಲ್ ನ್ಯಾಯಾಧೀಶ ಪುಟ್ಟರಾಜು ಕಾರ್ಯಕ್ರಮ ಉದ್ಘಾಟಿಸಿದರು. ನ್ಯಾಯವಾದಿ ಕೆ. ಕೃಷ್ಣ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪದ್ಮಪ್ರಸಾದ್ ಜೈನ್, ವಿಕಲಚೇತನರ ಸಬಲೀಕರಣ ಅಧಿಕಾರಿ ರತ್ನಾ, ದುರ್ಗಾ ವಿದ್ಯಾ ಸಂಘದ ಅಧ್ಯಕ್ಷ ಕೆ. ರಾಧಾಕೃಷ್ಣ ಶೆಟ್ಟಿ, ಕಾರ್ಯದರ್ಶಿ ಹರೀಶ್ ಕೋಟ್ಯಾನ್, ಟ್ರಸ್ಟಿ ಸಿಯಾ ಸಂತೋಷ್ ನಾಯಕ್, ಕಿರಣ್ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥಾಪಕಿ ಡಾ. ಕಾಂತಿ ಹರೀಶ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಕು. ಹರ್ಷಿತಾ ಡಿ. ಹೆಗ್ಡೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಕು. ಶುೃತಿ ವಂದಿಸಿದರು. ವಿಜೇತ ಶಾಲಾ ಮಕ್ಕಳು, ಪೋಷಕರು, ಸಿಬ್ಬಂದಿ ವರ್ಗ, ಆಡಳಿತ ಮಂಡಳಿ ಉಪಸ್ಥಿತರಿದ್ದರು.
ವಿಶ್ವ ವಿಕಲಚೇತನರ ದಿನಾಚರಣೆ




























































