ಬೆಂಗಳೂರು : ರೂಪಾಂತರ ಹೊಂದಿದ ನೂತನ ಕೋವಿಡ್ ವೈರಸ್ ವೇಗವಾಗಿ ಹರಡುವ ಭೀತಿಯಲ್ಲಿ 9 ದಿನಗಳ ಕಾಲ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡುವುದಾಗಿ ತಿಳಿಸಿದ್ದ ದಿನಾಂಕ ಮತ್ತು ಸಮಯವನ್ನು ಬದಲಾವಣೆ ಮಾಡಲಾಗಿದೆ. ಡಿಸೆಂಬರ್ 24ರ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಜನವರಿ 2 ರ ವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುವುದು. ಡಿ. 24ರಂದು ರಾತ್ರಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಯಾವುದೇ ಅಡಚಣೆಯಿಲ್ಲದೆ ಮಾಡಬಹುದಾಗಿದ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮೂಲಕ ಘೋಷಿಸಿದ್ದಾರೆ.






































