ಬೆಂಗಳೂರು : ವಾಹನ ವಿಮೆ ಕುರಿತಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರೀಮಿಯಂ ಸ್ವೀಕರಿಸಿದ ಕ್ಷಣದಿಂದಲೇ ಪಾಲಿಸಿ ಜಾರಿಗೆ ಬಂದು ವಾಹನವು ಹಾನಿ ಪರಿಹಾರದ ವ್ಯಾಪ್ತಿಗೆ ಬರಲಿದೆ ಎಂದು ಹೈಕೋರ್ಟ್ ತೀರ್ಪು ನೀಡಿದೆ.
ವಾಹನ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹಂಚೇಟಿ ಸಂಜೀವ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರೀಮಿಯಂ ಮೊತ್ತ ಸ್ವೀಕರಿಸಿದ ದಿನದ ಮಧ್ಯರಾತ್ರಿಯಿಂದ ಪಾಲಿಸಿ ಜಾರಿಯಾಗಿ ಹಾನಿ ಪರಿಹಾರದ ವ್ಯಾಪ್ತಿ ಆರಂಭವಾಗುತ್ತದೆ ಎಂಬ ವಿಮಾ ಕಂಪನಿಯ ವಾದವನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಪ್ರೀಮಿಯಂ ಸ್ವೀಕರಿಸಿದ ಕ್ಷಣದಿಂದಲೇ ಪಾಲಿಸಿ ಜಾರಿಗೆ ಬಂದು ವಾಹನವು ಹಾನಿ ಪರಿಹಾರದ ವ್ಯಾಪ್ತಿಗೆ ಬರಲಿದೆ ಎಂದು ಹೇಳಿದೆ.
ವಾಹನ ವಿಮೆ ಕುರಿತಂತೆ ಕರ್ನಾಟಕ ಹೈಕೋರ್ಟ್ ನಿಂದ ಮಹತ್ವದ ತೀರ್ಪು









