ವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌. ಧರ್ಮೆಗೌಡ ಆತ್ಮಹತ್ಯೆ

ಚಿಕ್ಕಮಗಳೂರು : ವಿಧಾನಪರಿಷತ್ ಉಪಸಭಾಪತಿ, ಜೆಡಿಎಸ್ ಸದಸ್ಯ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಿ. 28ರಂದು ಸಂಜೆ ಅವರು ರೈಲಿಗೆ ತಲೆ ಕೊಟ್ಟು ಸಾವನ್ನಪ್ಪಿದ್ದಾರೆ. ಇತ್ತೀಚೆಗೆ ವಿಧಾನಪರಿಷತ್​ನಲ್ಲಿ ನಡೆದ ಘಟನೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದು ಅವರು ಬರೆದಿಟ್ಟಿರುವ ಡೆತ್​ನೋಟ್​ನಿಂದ ತಿಳಿದುಬಂದಿದೆ. ಕಡೂರು ತಾಲೂಕು ಬಳಿ ರೈಲ್ವೆ ಹಳಿಯಲ್ಲಿ ಅವರ ರುಂಡ ಮುಂಡ ಬೇರ್ಪಟ್ಟ ದೇಹ ಪತ್ತೆಯಾಗಿದೆ. ಅವರು ಪತ್ನಿ ಮಮತಾ, ಮಗ ಸೋನಾಲ್, ಮಗಳು ಸೋನಾಲಿ ಅವರನ್ನ ಅಗಲಿದ್ದಾರೆ. ಸಖರಾಯಪಟ್ಟಣದಿಂದ ಸಂಜೆ 6:30ಕ್ಕೆ ಖಾಸಗಿ ಡ್ರೈವರ್ ಜೊತೆ ಕಾರಿನಲ್ಲಿ ಹೊರಟ ಅವರು ಕಡೂರು ತಾಲೂಕು ಗುಣಸಾಗರ ಬಳಿ ಕಾರು ನಿಲ್ಲಿಸಿದ್ದಾರೆ. ತಮ್ಮಎಸ್ಕಾರ್ಟ್ ಸಿಬ್ಬಂದಿಯನ್ನ ಅಲ್ಲಿಯೇ ಬಿಟ್ಟು ಖಾಸಗಿ ಡ್ರೈವರ್ ಜೊತೆ ಅವರು ಹೊರಟಿದ್ದರು. ಒಬ್ಬ ವ್ಯಕ್ತಿಯ ಜೊತೆ ಸ್ವಲ್ಪ ಕೆಲಸ ಇದ್ದು ಹೋಗಿ ಬರುತ್ತೇನೆ ಎಂದು ಹೇಳಿ ಹೋದರೆನ್ನಲಾಗಿದೆ. ನಂತರ ಕಡೂರಿನ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ಶತಾಬ್ದಿ ಎಕ್ಸ್​ಪ್ರೆಸ್ ಬರುವ ಸಮಯ ವಿಚಾರಿಸಿದರೆನ್ನಲಾಗಿದೆ. ಎಸ್.ಎಲ್. ಧರ್ಮೇಗೌಡ ಅವರು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸದೃಢ ಕುಟುಂಬದ ಹಿನ್ನೆಲೆಯವರು. ಅವರ ಕುಟುಂಬ ರಾಜಕೀಯವಾಗಿ ಶಕ್ತಿಶಾಲಿಯಾಗಿತ್ತು. ಆರ್ಥಿಕವಾಗಿಯೂ ಅವರು ಒಳ್ಳೆಯ ಸ್ಥಿತಿಯಲ್ಲಿದ್ದರು. ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನ ಮಟ್ಟದಿಂದ ವಿವಿಧ ಸ್ತರಗಳ ರಾಜಕೀಯದಲ್ಲಿ ಅನುಭವಿ ಎನಿಸಿದ್ದರು.















































































error: Content is protected !!
Scroll to Top