ಕಾರ್ಕಳ : ಕಾರ್ಕಳ ಮಂಜುನಾಥ ಪೈ ಸಭಾಂಗಣದಲ್ಲಿ ನಡೆಯುವ ಬಿಜೆಪಿ ಅಭಿನಂದನಾ ಕಾರ್ಯಕ್ರಮದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖಾ ಸಚಿವ ಸಿ.ಸಿ. ಪಾಟೀಲ್ ಭಾಗವಹಿಸಲಿದ್ದಾರೆ. ಅಭಿನಂದನಾ ಕಾರ್ಯಕ್ರಮದ ಅನಂತರ 12.15ಕ್ಕೆ ಶಾಸಕ ಕಚೇರಿ ವಿಕಾಸದಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು, ಈ ವೇಳೆ ಕಲ್ಲು, ಗಣಿ ಗುತ್ತಿಗೆದಾರರೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಹಾಗೂ ಇತರ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಕರಾವಳಿ ಭಾಗಕ್ಕೆ ಪ್ರತ್ಯೇಕ ಮರಳು ನೀತಿ ಹಾಗೂ ಕಲ್ಲು ಗಣಿಗಾರಿಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಚಿವರ ಗಮನಕ್ಕೆ ತರಲಾಗುವುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ್ ಜ. 6ರಂದು ಕಾರ್ಕಳಕ್ಕೆ



























