ಕೊಚ್ಚಿ- ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ಲೈನ್ ಲೋಕಾರ್ಪಣೆಗೊಳಿಸಿದ್ದಾರೆ. 

ಕೇರಳದ ಕೊಚ್ಚಿಯಿಂದ ಕರ್ನಾಟಕದ ಮಂಗಳೂರಿಗೆ ನೈಸರ್ಗಿಕ ಅನಿಲ ಪೂರೈಸುವ ಪೈಪ್ಲೈನ್ ಅನ್ನು ಗೈಲ್ ಇಂಡಿಯಾ ನಿರ್ಮಿಸಿದೆ. 

2009ರಲ್ಲೇ ಇದರ ನಿರ್ಮಾಣ ಕಾಮಗಾರಿ ಆರಂಭವಾಗಿತ್ತು. ಸುಮಾರು 3,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ 450 ಕಿ.ಮೀ ಉದ್ದದ ಪೈಪ್ಲೈನ್ ಇದಾಗಿದ್ದು, ದಿನಕ್ಕೆ 12 ಮಿಲಿಯನ್ ಮೆಟ್ರಿಕ್ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್ ಅನಿಲವನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ.

ನೈಸರ್ಗಿಕ ಅನಿಲ ಪೈಪ್ಲೈನ್ ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿರುವ ಪ್ರಧಾನಿ ಮೋದಿಯವರು, 450 ಕಿ.ಮೀ ಉದ್ದದ ನೈಸರ್ಗಿಕ ಪೈಪ್‌ಲೈನ್ ಅನ್ನು ರಾಷ್ಟ್ರಕ್ಕೆ ಲೋಕಾರ್ಪಣೆ ಮಾಡುತ್ತಿರುವುದು ಗೌರವದ ವಿಚಾರ. ಇದು ಭಾರತಕ್ಕೆ, ವಿಶೇಷವಾಗಿ ಕರ್ನಾಟಕ ಮತ್ತು ಕೇರಳದ ಜನರಿಗೆ ಮಹತ್ವದ ದಿನವಾಗಿದೆ ಎಂದು ಹೇಳಿದ್ದಾರೆ. 























































error: Content is protected !!
Scroll to Top