ಶಿಮ್ಲಾ: ಉತ್ತರ ಭಾರತದಲ್ಲಿ ಹಕ್ಕಿಜ್ವರ ತೀವ್ರಗೊಂಡಿದ್ದು, ವಿವಿಧ ದೇಶಗಳಿಂದ ಹಿಮಾಚಲ ಪ್ರದೇಶಕ್ಕೆ ಬಂದಿದ್ದ ಸಾವಿರಾರು ವಲಸೆ ಪಕ್ಷಿಗಳು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿವೆ. ಅಂತೆಯೇ ಈ ಸಾವಿನ ಸಂಖ್ಯೆ ಮುಂದಿನ ದಿನಗಳಲ್ಲಿ ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹಿಮಾಚಲ ಪ್ರದೇಶ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಮೂಲಗಳ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಹಕ್ಕಿಜ್ವರದಿಂದಾಗಿ ಈವರೆಗೆ 2,400 ಕ್ಕೂ ಹೆಚ್ಚು ಪಕ್ಷಿಗಳು ಸತ್ತಿದ್ದು, ಈ ಸಂಖ್ಯೆ ಮುಂದಿನಗಳಲ್ಲಿ ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹಿಮಾಚಲ ಪ್ರದೇಶ ರಾಜ್ಯ ಅರಣ್ಯ ಸಚಿವ ರಾಕೇಶ್ ಪಥಾನಿಯಾ ತಿಳಿಸಿದ್ದಾರೆ.



























































