ಕಾರ್ಕಳ : ಕಾರ್ಕಳ ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನ ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಹಾಲ್ದಿನ್ ಗ್ಲಾಸ್ ಸಭಾಂಗಣದಲ್ಲಿ ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಮ್ಮೇಳನ ಸಮಿತಿ ಗೌರವಾಧ್ಯಕ್ಷ ಶಾಸಕ ವಿ. ಸುನಿಲ್ ಕುಮಾರ್, ಡಾ. ಜೆ. ದಿನೇಶ್ಚಂದ್ರ ಹೆಗ್ಡೆ, ಕಾರ್ರ್ಯಾಧ್ಯಕ್ಷರಾಗಿ ನಿವೃತ್ತ ಶಿಕ್ಷಕ ಕೆ. ಮಂಜುನಾಥ ಶೆಟ್ಟಿ, ಕಾರ್ಯದರ್ಶಿ ಶಾಂತಿನಾಥ ಜೋಗಿ ಅವರನ್ನು ಆಯ್ಕೆ ಮಾಡಲಾಯಿತು. ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸಮಿತಿ ರಚನೆ ಮಾಡಲಾಯಿತು. ಕಸಾಪ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್. ಶಶಿಧರ್, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂತೋಷ ವಾಗ್ಲೆ, ಪ್ರಾಚಾರ್ಯ ಗುರುಮೂರ್ತಿ ಎನ್.ಟಿ., ತಾ.ಪಂ. ಮಾಜಿ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಕಸಾಪ ಬೈಲೂರು ಹೋಬಳಿ ಅಧ್ಯಕ್ಷ ದಿನೇಶ್ ಶೆಟ್ಟಿ, ಕಸಾಪ ಕಾರ್ಕಳ ತಾಲೂಕಿನ ಸಂಘಟನಾ ಕಾರ್ಯದರ್ಶಿಗಳಾದ ದೇವದಾಸ್ ಕೆರೆಮನೆ, ಶಿವಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು. ಕನ್ನಡ ಸಾಹಿತ್ಯ ಪರಿಷತ್ನ ಸದಸ್ಯ ರಾಜೇಂದ್ರ ಭಟ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪ ಪ್ರಾಂಶುಪಾಲ ನಾಗರಾಜ್ ವಂದಿಸಿದರು.




























































