ಕಾರ್ಕಳ ಗ್ರಾಮಾಂತರ ಠಾಣೆ ಎಸ್‌ಐ ಆಗಿ ತೇಜಸ್ವಿ ಅಧಿಕಾರ ಸ್ವೀಕಾರ

ಕಾರ್ಕಳ : ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಸ್‌ಐ ಆಗಿದ್ದ ತೇಜಸ್ವಿ ಅವರು ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ಎಸ್‌ಐ ಆಗಿ ಸೋಮವಾರ ಅಧಿಕಾರ ಸ್ವೀಕರಿಸಿದರು. ಮೂಲತಃ ಚಿಕ್ಕಮಗಳೂರಿನವರಾದ ತೇಜಸ್ವಿ ಅವರು ಈ ಹಿಂದೆ ಹೊನ್ನಾವರ, ಬಾಳೆಹೊನ್ನೂರು, ಕೊಪ್ಪ ಪೊಲೀಸ್‌ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಎಸ್‌ಐ ಆಗಿದ್ದ ನಾಸಿರ್‌ ಹುಸೇನ್‌ ಅವರು ಮಂಗಳೂರು ಐಜಿ ಕಚೇರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ತೇಜಸ್ವಿ ಅವರ ನೇಮಕವಾಗಿದೆ.





























































































































error: Content is protected !!
Scroll to Top