ಆನೆಕೆರೆಯಲ್ಲಿ ಅಪರಿಚಿತ ಶವ ಪತ್ತೆ

ಕಾರ್ಕಳ : ಕಾರ್ಕಳ ಆನೆಕೆರೆಯಲ್ಲಿ ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯೋರ್ವರ ಶವ ಪತ್ತೆಯಾಗಿದೆ. ದೇಹದಲ್ಲಿ ಯಾವೊಂದು ಗಾಯವಿಲ್ಲದ ಕಾರಣ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡರೋ ಅಥವಾ ಆಕಸ್ಮಿಕವಾಗಿ ಕಾಲು ಜಾರಿ ನೀರುಪಾಲಾದರೋ ಎಂದು ಪೊಲೀಸ್‌ ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಪೊಲೀಸ್‌ ಠಾಣೆ ಎಸ್‌ಐ ಮಧು ಬಿ.ಇ. ತಂಡ ಆಗಮಿಸಿ, ತನಿಖೆ ಕಾರ್ಯ ಕೈಗೆತ್ತಿಕೊಂಡಿದೆ. ಮೃತದೇಹ ಕಾರ್ಕಳ ಸರಕಾರಿ ಆಸ್ಪತ್ರೆ ಶವಾಗಾರದಲ್ಲಿದ್ದು, ವಾರಿಸುದಾರರು ಆಸ್ಪತ್ರೆ ಅಥವಾ ಕಾರ್ಕಳ ನಗರ ಪೊಲೀಸ್‌ ಠಾಣೆ ಸಂಪರ್ಕಿಸುವಂತೆ ಎಸ್‌ಐ ಅವರು ತಿಳಿಸಿದ್ದಾರೆ.





























































































































































































































error: Content is protected !!
Scroll to Top