ಕಾರ್ಕಳ : ವಿವೇಕಾನಂದ ಜಯಂತಿಯಂಗವಾಗಿ ಬಿಜೆಪಿ ಯುವಮೋರ್ಚಾ ಕಾರ್ಕಳ ಇದರ ವತಿಯಿಂದ ಕಾರ್ಕಳ ಮಂಜುನಾಥ ಪೈ ಸ್ಮಾರಕ ಸಭಾಂಗಣದಲ್ಲಿ ಜ. 14ರಂದು ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್, ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ಭಾಗವಹಿಸಲಿದ್ದು, ಯುವಮೋರ್ಚಾ ತಾಲೂಕು ಅಧ್ಯಕ್ಷ ಸುಹಾಸ್ ಶೆಟ್ಟಿ ಮುಟ್ಲುಪಾಡಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಸಾಲ್ಯಾನ್ ಮತ್ತು ಭರತ್ ಕುಮಾರ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ. 14 : ಮಂಜುನಾಥ ಪೈ ಸಭಾಂಗಣದಲ್ಲಿ ಸ್ವಾಮೀ ವಿವೇಕಾನಂದ ಜಯಂತಿ ಆಚರಣೆ



























































