ಧಾರವಾಡ: ಟೆಂಪೋ ಟ್ರಾವೆಲರ್ -ಟಿಪ್ಪರ್ ನಡುವೆ ಭೀಕರ ಅಪಘಾತ 8 ಮಂದಿ ದುರ್ಮರಣ

ಧಾರವಾಡ: ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 8 ಮಂದಿ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಗೋವಾಗೆ ತೆರಳ್ತಿದ್ದ ವೇಳೆ ಟಿಪ್ಪರ್‌ವೊಂದು ಢಿಕ್ಕಿ ಹೊಡೆದಿದೆ ಪರಿಣಾಮ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಿಂದಾಗಿ ಟೆಂಪೋ ಟ್ರಾವೆಲರ್‌ ಹಾಗೂ ಟಿಪ್ಪರ್‌ನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಇನ್ನು ಅಪಘಾತದಲ್ಲಿ ಹಲವರು ಸಾವನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಟೆಂಪೋ ಒಳಗೆ ಸಿಲುಕಿರುವ ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.























































































































error: Content is protected !!
Scroll to Top