ಕಾರ್ಕಳ : ಕಾಂಗ್ರೆಸ್ ಕಾರ್ಯಕರ್ತರಾದ ಪ್ರಕಾಶ್ ಆಚಾರ್ಯರ ಮೇಲೆ ಹಲ್ಲೆಗೈದ ಹಿಂದೂ ಜಾಗರಣ ವೇದಿಕೆಯ ಸದಸ್ಯರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಾರ್ಕಳ ಕಾಂಗ್ರೆಸ್ ನಿಯೋಗ ಬುಧವಾರ ಡಿವೈಎಸ್ಪಿ ಹಾಗೂ ವೃತ್ತ ನಿರೀಕ್ಷಕ ಹಾಗೂ ಎಸ್ಐ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಹಲ್ಲೆಗೈದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಮೂಲಕ ಪ್ರಕಾಶ್ ಆಚಾರ್ಯರಿಗೆ ನ್ಯಾಯ ಒದಗಿಸಿಕೊಡುವಂತೆ ಕಾಂಗ್ರೆಸ್ ನಿಯೋಗ ಈ ಸಂದರ್ಭ ಒತ್ತಾಯಿಸಿತು.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಪೂಜಾರಿ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ರವಿಶಂಕರ್ ಶೇರಿಗಾರ್, ಕಾಂಗ್ರೆಸ್ ಬ್ಲಾಕ್ ಉಪಾಧ್ಯಕ್ಷರಾದ ಸುಧಾಕರ್ ಕೋಟ್ಯಾನ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಬಂಗೇರ, ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್, ನಗರ ಕಾಂಗ್ರೆಸ್ ಅಧ್ಯಕ್ಷೆ ಕಾಂತಿ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಯೋಗೀಶ್ ನಯನ್ ಇನ್ನ, ಸುನಿಲ್ ಕುಮಾರ್ ಭಂಡಾರಿ, ಬ್ಲಾಕ್ ಕಾಂಗ್ರೆಸ್ ಐ.ಟಿ. ಸೆಲ್ ಅಧ್ಯಕ್ಷ ಸತೀಶ್ ಕಾರ್ಕಳ ಮತ್ತಿತರರು ಉಪಸ್ಥಿತರಿದ್ದರು.
ಪ್ರಕಾಶ್ ಆಚಾರ್ಯರಿಗೆ ಹಲ್ಲೆಗೈದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಿಯೋಗ ಒತ್ತಾಯ



























































