ಚೆನ್ನೈ: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 337 ರನ್ ಗಳಿಗೆ ಆಲೌಟ್ ಆಗಿದೆ.
ನಿನ್ನೆ ಭಾರತ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 257 ಸೇರಿಸಿತ್ತು. ಇಂದು ಭಾರತ ತಂಡ 337 ರನ್ ಗಳಿಗೆ ಆಲೌಟ್ ಆಗಿದೆ. ಆ ಮೂಲಕ ಮೊದಲ ಇನ್ನಿಂಗ್ಸ್ ನಲ್ಲಿ ಕೊಹ್ಲಿ ಪಡೆ 241 ರನ್ ಗಳ ಹಿನ್ನಡೆ ಅನುಭವಿಸಿದೆ. ನಿನ್ನೆ ಭಾರತ ತಂಡದ ಬ್ಯಾಟಿಂಗ್ ಆಸರೆಯಾಗಿದ್ದ ವಾಷಿಂಗ್ಟನ್ ಸುಂದರ್ ಇಂದೂ ಕೂಡ ತಮ್ಮ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದರು. ಸುಂದರ್ 85 ರನ್ ಗಳಿಸಿ ಅಜೇಯರಾಗಿ ಉಳಿದರು. ಆದರೆ ಸುಂದರ್ ಗೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್ ದೊರೆಯಲಿಲ್ಲ.






























































