ಕೇರಳ ಶಾಲೆಯ 192 ವಿದ್ಯಾರ್ಥಿಗಳು- 72 ಸಿಬ್ಬಂದಿಗೆ ಕೊರೋನಾ ಸೋಂಕು

ಮಲಪ್ಪುರಂ: ಕೇರಳದಲ್ಲಿ 192 ವಿದ್ಯಾರ್ಥಿಗಳು, 72 ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಹೌದು.. ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿನ ಪ್ರಮಾಣ ತಗ್ಗುತ್ತಿದೆಯಾದರೂ, ಅಲ್ಲಲ್ಲಿ ತನ್ನ ರುದ್ರ ನರ್ತನವನ್ನು ಮುಂದುವರೆಸಿದೆ. ಇದಕ್ಕೆ ಇಂಬು ನೀಡುವಂತೆ ಕೇರಳದ ಶಾಲೆಗಳಲ್ಲಿ 192 ವಿದ್ಯಾರ್ಥಿಗಳು, 72 ಸಿಬ್ಬಂದಿಗೆ ಕೊರೋನಾ ಸೋಂಕು ಒಕ್ಕರಿಸಿದೆ. ಕೇರಳದ ಮಲಪ್ಪುರಂನ ಎರಡು ಮಧ್ಯಮ ಮತ್ತು ಪ್ರೌಢ ಶಾಲೆಗಳಲ್ಲಿ ಬರೊಬ್ಬರಿ 192 ವಿದ್ಯಾರ್ಥಿಗಳು, 72 ಸಿಬ್ಬಂದಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅತ್ತ ಸೋಂಕು ದೃಢಪಟ್ಟ ಬೆನ್ನಲ್ಲೇ ಇದೀಗ ಎರಡೂ ಶಾಲೆಗಳನ್ನೂ ಮುಚ್ಚಿ ಸೀಲ್ ಡೌನ್ ಮಾಡಲಾಗಿದೆ.

ಮೂಲಗಳ ಪ್ರಕಾರ ಮಲಪ್ಪುರಂನ ಮಾರಂಚೇರಿಯ ಸರ್ಕಾರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 148 ವಿದ್ಯಾರ್ಥಿಗಳು ಮತ್ತು 39 ಸಿಬ್ಬಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಪೆರುಂಬದಪ್ಪದ ವನ್ನೇರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 39 ವಿದ್ಯಾರ್ಥಿಗಳು ಮತ್ತು 36 ಶಿಕ್ಷಕರಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತ ಎಲ್ಲ ವಿದ್ಯಾರ್ಥಿಗಳೂ ಹತ್ತನೇ ತರಗತಿಯವರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೋಂಕಿತರಲ್ಲಿ ಯಾರೊಬ್ಬರೂ ಗಂಭೀರ ಸ್ಥಿತಿಯಲ್ಲಿಲ್ಲ ಎಂದು ಜಿಲ್ಲಾ ವೈದ್ಯಕೀಯ ಅಧಿಕಾರಿಗಳು ಮಾಹಿತಿ ನೀಡಿದ್ದು, ಜನವರಿ 25 ರಂದು ಎರಡೂ ಶಾಲೆಗಳಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಿಯಮಿತ ತರಗತಿಗಳು ಪುನರಾರಂಭಗೊಂಡಿದ್ದವು. ಮಾರಂಚೇರಿ ಶಾಲೆಯ ವಿದ್ಯಾರ್ಥಿಯೊಬ್ಬ ಸೋಂಕಿಗೆ ತುತ್ತಾದ ನಂತರ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇದೀಗ ಎಲ್ಲಾ ಸೋಂಕಿತರು ಮತ್ತು ಅವರ ತಕ್ಷಣದ ಸಂಪರ್ಕಿತರರನ್ನು ಗುರುತಿಸಲಾಗುತ್ತಿದೆ.  ಎಲ್ಲ ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಹೋಮ್ ಕ್ವಾರಂಟೈನ್ ಗೆ ಒಳಗಾಗುವಂತೆ ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎರಡೂ ಶಾಲೆಗಳ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.









































































































error: Content is protected !!
Scroll to Top