Sunday, March 7, 2021
Home Slider ರಾಜ್ಯದಲ್ಲಿ ಕೊರೋನಾ ಸಂಪೂರ್ಣ ಹೋಗಿಲ್ಲ-ಜನ ಮೈಮರೆತರೆ ಅಪಾಯ ತಪ್ಪಿದ್ದಲ್ಲ: ಸಚಿವ ಸುಧಾಕರ್

ರಾಜ್ಯದಲ್ಲಿ ಕೊರೋನಾ ಸಂಪೂರ್ಣ ಹೋಗಿಲ್ಲ-ಜನ ಮೈಮರೆತರೆ ಅಪಾಯ ತಪ್ಪಿದ್ದಲ್ಲ: ಸಚಿವ ಸುಧಾಕರ್

ಚಿಕ್ಕಬಳ್ಳಾಪುರ: ನೆರೆಯ ಕೇರಳ, ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿದ್ದು, ರಾಜ್ಯದಲ್ಲೂ ಕೊರೋನಾ 2ನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಕೊರೋನಾ ವಿಚಾರದಲ್ಲಿ ಜನರು ಮೈಮರೆತಿದ್ದೇ ಆದರೆ, ಅಪಾಯ ತಪ್ಪಿದ್ದಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಾಕಷ್ಟು ಜನರು ಕೊರೋನಾ ನಿವಾರಣೆಯಾಗಿದೆ ಎಂಬ ತಪ್ಪುಗ್ರಹಿಕೆಯಲ್ಲಿದ್ದಾರೆ, ಕೋವಿಡ್ ಇನ್ನೂ ಸಂಪೂರ್ಣವಾಗಿ ಹೋಗಿಲ್ಲ. ನಮ್ಮ ಮಧ್ಯೆಯೇ ಇದೆ. ನೆರೆಯ ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ 2ನೇ ಅಲೆ ಕಾಣಿಸಿಕೊಳ್ಳುವ ಆತಂಕವಿದೆ. ಈ ಸಂಬಂಧ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಗೃಹ ಸಚಿವರೊಂದಿಗೆ ಚರ್ಚೆ ನಡೆಸಿ ಶೀಘ್ರದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಉಪಸ್ಥಿತಿಯಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ನೆರೆಯ ರಾಜ್ಯಗಳಿಂದ ಸೋಂಕು ಪ್ರವೇಶಿಸುವುದನ್ನು ತಡೆಯಲು ಕೇರಳ, ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ರಾಜ್ಯದ ಗಡಿ ಜಿಲ್ಲಗಳಲ್ಲಿ ಕೊರೋನಾ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಗೃಹ ಸಚಿವರಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಗೃಹ ಸಚಿವರ ಸಮ್ಮುಖದಲ್ಲಿ ಆಯಾ ಜಿಲ್ಲಾಡಳಿತಗಳೊಂದಿಗೆ ಶನಿವಾರ ವಿಡಿಯೋ ಸಂವಾದವನ್ನೂ ನಡೆಸಲಾಗುವುದು. ಈಗಾಗಲೇ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವವರಿಗೆ ಆರ್’ಟಿಪಿಸಿಆರ್ ಪ್ರಮಾಣ ಪತ್ರ ಕಡ್ಡಾಯ ಮಾಡಲಾಗಿದೆ ಎಂದಿದ್ದಾರೆ.

ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಪ್ರಧಾನಿ ಮೋದಿಯವರು ಉಚಿತವಾಗಿ ಕೊರೋನಾ ಲಸಿಕೆ ವಿತರಿಸುವ ವ್ಯವಸ್ಥೆ ಮಾಡಿದ್ದಾರೆ, ಕೋವಿಡ್ ಲಸಿಕೆ ಸಿಕ್ಕಿರುವುದು ನಮ್ಮೆಲ್ಲರ ಪುಣ್ಯ. ಇದರ ಸದುಪಯೋಗ ಆಗಬೇಕು. ಲಸಿಕೆ ಬಂದಿದೆ. ಆದರೂ ನಾವು ಮುಂಜಾಗ್ರತಾ ಕ್ರಮಗಳನ್ನು ಪಾಲನೆ ಮಾಡಬೇಕು. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಓಡಾಡಿದರೆ ಮುಂದಿನ ದಿನಗಳಲ್ಲಿ ಆಪತ್ತು ತಪ್ಪಿದ್ದಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
https://youtu.be/47zKJ8cyugc
error: Content is protected !!