Sunday, March 7, 2021
Home ದೇಶ ಮಾಸ್ಕ್ ಹಾಕಿಕೊಳ್ಳದಿದ್ದರೆ ಮತ್ತೊಮ್ಮೆ ಲಾಕ್ ಡೌನ್

ಮಾಸ್ಕ್ ಹಾಕಿಕೊಳ್ಳದಿದ್ದರೆ ಮತ್ತೊಮ್ಮೆ ಲಾಕ್ ಡೌನ್

ಮುಂಬೈ : ಭಾರತದಲ್ಲಿ ತಣ್ಣಗಾದ ಕೊರೊನಾವೈರಸ್ ಹಾವಳಿಗೆ ಮಹಾರಾಷ್ಟ್ರ ಮತ್ತೊಮ್ಮೆ ನಲುಗಿದೆ. ರಾಜ್ಯದಲ್ಲಿ ದಾಖಲೆ ಮಟ್ಟದ ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿರುವ ಬಗ್ಗೆ ಸ್ವತಃ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಕೆಲವು ದಿನಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದೆ. ಸಾರ್ವಜನಿಕರು ಕೊವಿಡ್-19 ಶಿಷ್ಟಾಚಾರಗಳನ್ನು ಕಡ್ಡಾಯವಾಗಿ ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 6971 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 21,00,884ಕ್ಕೆ ಏರಿಕೆಯಾಗಿದೆ. ಒಂದೇ ದಿನ 35 ಮಂದಿಗ ಮಹಾಮಾರಿಗೆ ಬಲಿಯಾಗಿದ್ದು, ಈವರೆಗೂ 51788 ಮಂದಿ ಪ್ರಾಣ ಬಿಟ್ಟಿದ್ದಾರೆ. 2417 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 19,94,947 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 52,956 ಸಕ್ರಿಯ ಪ್ರಕರಣಗಳಿವೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
https://youtu.be/47zKJ8cyugc
error: Content is protected !!