Sunday, March 7, 2021
Home Slider ರಾಜ್ಯದಲ್ಲಿ ಮತ್ತೊಂದು ಜಿಲಿಟೆನ್ ದುರಂತ: ಚಿಕ್ಕಬಳ್ಳಾಪುರ ಸ್ಫೋಟದಲ್ಲಿ ಕನಿಷ್ಠ ಆರು ಮಂದಿ ಸಾವು

ರಾಜ್ಯದಲ್ಲಿ ಮತ್ತೊಂದು ಜಿಲಿಟೆನ್ ದುರಂತ: ಚಿಕ್ಕಬಳ್ಳಾಪುರ ಸ್ಫೋಟದಲ್ಲಿ ಕನಿಷ್ಠ ಆರು ಮಂದಿ ಸಾವು

ಚಿಕ್ಕಬಳ್ಳಾಪುರ: ಶಿವಮೊಗ್ಗ ಜಿಲ್ಲೆಯ ಹುಣಸೋಡಿಯಲ್ಲಿ ಸಂಭವಿಸಿದ್ದ ಜಿಲೆಟಿನ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಅಂತಹುದೇ ಮತ್ತೊಂದು ದುರಂತ ಸಂಭವಿಸಿದ್ದು ಈ ದುರ್ಘಟನೆಯಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವೇಲಿ ಗ್ರಾಮದ ಬಳಿ ಅಕ್ರಮವಾಗಿ ಜಿಲೆಟಿನ್‌ ಸಾಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಆರು ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿದ್ದು, ದುರಂತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. 

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಪೆರೇಸಂದ್ರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಮೂಲಗಳ ಪ್ರಕಾರ ಭ್ರಮರವಾಸಿನಿ ಕ್ರಷರ್ ನಿಂದ ಸರಿಸುಮಾರು ಒಂದೂವರೆ ಕಿಲೋಮೀಟರ್ ದೂರದ ಅರಣ್ಯಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರನ್ನು ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಅಪರೇಟರ್  ಗಂಗಾಧರ್, ವೇಯರ್ ಮುರುಳಿ ಹಾಗೂ ವಾಚ್ ಮೆನ್ ಮಹೇಶ್ ಸೇರಿದಂತೆ ಸ್ಥಳೀಯ ರಾಮು ಎಂದು ಗುರುತಿಸಲಾಗಿದೆ.

ಟಾಟಾ ಏಸ್ ಚಾಲಕ ರಿಯಾಜ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಟಾಟಾ ಏಸ್ ಹಾಗೂ ಒಂದು ಬೈಕ್ ಮೂಲಕ ಭ್ರಮರವಾಸಿನಿ ಕ್ರಷರ್ ನಿಂದ ಒಂದು ಕಿಲೋಮೀಟರ್ ದೂರದ ಅರಣ್ಯ ಪ್ರದೇಶಕ್ಕೆ ತೆರಳಿ ಅಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದ ಜಿಲೆಟಿನ್ ಹಾಗೂ ಎಲೆಕ್ಟ್ರಿಕ್ ಡಿಟೋನೇಟರ್ಸ್ ಹೊತ್ತು ತರಲು ಮುಂದಾಗಿದ್ದಾರೆ. ಅರಣ್ಯ ಪ್ರದೇಶದಲ್ಲಿ ಅಡಗಿಸಿದ್ದ ಸ್ಫೋಟಕಗಳನ್ನ ಹೊತ್ತು ತರುವ ವೇಳೆ ಏಕಾಏಕಿ ಬ್ಲಾಸ್ಟ್ ಆಗಿದ್ದು, ಪರಿಣಾಮ ಐದು ಮಂದಿಯ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಛಿಧ್ರ ಛಿದ್ರವಾಗಿ ಮೃತದೇಹಗಳೆಲ್ಲಾ ನೂರಾರು ಮೀಟರ್ ವರೆಗೂ ಚೆಲ್ಲಾಪಿಲ್ಲಿಗಳಾಗಿವೆ.  

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
https://youtu.be/47zKJ8cyugc
error: Content is protected !!