ಬರಿಗೈನಲ್ಲಿ ಚಿರತೆ ಸೆರೆ ಹಿಡಿದ ಯುವಕರು: ವೈರಲ್ ಆಯ್ತು ವಿಡಿಯೋ

ಮಂಡ್ಯ: ಯಾವುದೇ ಸುರಕ್ಷತಾ ಕ್ರಮಗಳನ್ನು ಬಳಸದೇ ಬರಿಗೈನಲ್ಲಿ ಚಿರತೆ‌ ಸೆರೆ ಹಿಡಿದು ಯುವಕರು ಸಾಹಸ ಮೆರೆದಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಗಡಿಭಾಗದ ಯಾಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಸುಮಾರು ತಿಂಗಳಿಂದ ಗ್ರಾಮಕ್ಕೆ ಬಂದು ಉಪಟಳ ನೀಡುತ್ತಿದ್ದ ಚಿರತೆಯನ್ನು ಯುವಕರು ಸೆರೆ ಹಿಡಿದು ಹಗ್ಗದಲ್ಲಿ ಕಟ್ಟಿ ಹಾಕಿ ಅರಣ್ಯ ಇಲಾಖೆ ವಶಕ್ಕೆ ನೀಡಿದ್ದಾರೆ. ಯುವಕರ ಈ ಸಾಹಸಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.































































































error: Content is protected !!
Scroll to Top