ದಕ್ಷಿಣ ಆಫ್ರಿಕಾದ ಕೋವಿಡ್ ರೂಪಾಂತರಿ ಶಿವಮೊಗ್ಗದಲ್ಲಿ ಪತ್ತೆ: ಜಿಲ್ಲೆಯ ನಾಗರಿಕರಲ್ಲಿ ಆತಂಕ


ಶಿವಮೊಗ್ಗ:
 ದುಬೈಯಿಂದ ಶಿವಮೊಗ್ಗಕ್ಕೆ ಇತ್ತೀಚೆಗೆ ಬಂದ ವ್ಯಕ್ತಿಯಲ್ಲಿ ದಕ್ಷಿಣ ಆಫ್ರಿಕಾದ ಕೊರೋನಾ ವೈರಸ್ ರೂಪಾಂತರಿ ಪತ್ತೆಯಾಗಿದೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ 53 ವರ್ಷದ ವ್ಯಕ್ತಿ ಕೊರೋನಾ ಸೋಂಕು ಉಲ್ಬಣಗೊಂಡು ದಾಖಲಾಗಿದ್ದಾರೆ. ನಿನ್ನೆ ಅವರಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರಿ ಕೊರೋನಾ ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ ರಾಜೇಶ್ ಸುರಗಿಹಳ್ಳಿ ತಿಳಿಸಿದ್ದಾರೆ.

18 ದಿನಗಳ ಹಿಂದೆ ಕರ್ನಾಟಕಕ್ಕೆ ಬಂದಿದ್ದ ಸಮಯದಲ್ಲಿ ಇವರ ಸ್ಯಾಂಪಲ್ ಪರೀಕ್ಷೆ ಮಾಡಿದಾಗ ಯಾವುದೇ ಲಕ್ಷಣ ಕಂಡುಬರಲಿಲ್ಲ. ಇದೀಗ ಪತ್ತೆಯಾಗಿದ್ದು ಅವರನ್ನು ಸಂಪರ್ಕಿಸಿದವರನ್ನೆಲ್ಲಾ ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ದಕ್ಷಿಣ ಆಫ್ರಿಕಾದ ಸಾರ್ಸ್ -ಕೋವಿಡ್-2 ರೂಪಾಂತರಿ ಕಾಣಿಸಿಕೊಂಡಿದ್ದು ಶಿವಮೊಗ್ಗ ಜಿಲ್ಲೆಯ ಜನತೆಯನ್ನು ಆತಂಕಕ್ಕೀಡುಮಾಡಿದೆ.

ಕಳೆದ ವರ್ಷ ಮೇ 10ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಕೋವಿಡ್-19 ಕೇಸು ವರದಿಯಾಗಿತ್ತು.































































































error: Content is protected !!
Scroll to Top