ಕಾರ್ಕಳ : ನೆಹರು ಯುವ ಕೇಂದ್ರದಲ್ಲಿ ಕಳೆದ 32 ವರ್ಷಗಳಿಂದ ಕರ್ತವ್ಯ ಸಲ್ಲಿಸಿ, ನಿವೃತ್ತ ಹೊಂದಿರುವ ಸಿ.ಕೆ. ನಾರಾಯಣ ಅವರನ್ನು ಸಾಣೂರು ಯುವಕ ಮಂಡಲದ ವತಿಯಿಂದ ಸನ್ಮಾನಿಸಲಾಯಿತು. ನೆಹರು ಯುವ ಕೇಂದ್ರ ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಸಾಣೂರು ಯುವಕ ಮಂಡಲದ ಅಧ್ಯಕ್ಷ ಪ್ರಸಾದ್ ಪೂಜಾರಿ, ಯುವಕ ಮಂಡಲದ ಪ್ರಧಾನ ಕಾರ್ಯದರ್ಶಿ ಮೋಹನ್ ಶೆಟ್ಟಿ ಗೌರವಿಸಿದರು. ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ದೇವಾನಂದ್ ಶೆಟ್ಟಿ, ಜಗದೀಶ್ ಕುಮಾರ್, ಪ್ರಕಾಶ್ ಮಡಿವಾಳ, ಕಾರ್ಯಕಾರಿ ಸಮಿತಿ ಸದಸ್ಯ ರಮೇಶ್ ಪೂಜಾರಿ ಉಪಸ್ಥಿತರಿದ್ದರು. ನೆಹರು ಯುವ ಕೇಂದ್ರ ಉಡುಪಿ ಜಿಲ್ಲಾ ಯುವ ಸಮನ್ವಯಾಧಿಕಾರಿ ವಿಲ್ಫ್ರೆಡ್ ಡಿ. ಸೋಜಾ ಅಧ್ಯಕ್ಷತೆ ವಹಿಸಿದ್ದರು. ನೆಹರು ಯುವ ಕೇಂದ್ರ ಸಂಘಟನೆಯ ಉಭಯ ಜಿಲ್ಲಾ ಲೆಕ್ಕಧಿಕಾರಿ ವಿಷ್ಣುಮೂರ್ತಿ ಕಾರ್ಯಕ್ರಮ ನಿರ್ವಹಿಸಿದರು.
Recent Comments
ಕಗ್ಗದ ಸಂದೇಶ
on