ಹೆಚ್ ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು

ಬೆಂಗಳೂರು: ಇದೀಗ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರಿಗೂ ಕೊರೋನಾ ಸೋಂಕು ತಗುಲಿದೆ.

ತಮಗೆ ಕೊರೋನಾ ಸೋಂಕು ಬಂದಿದೆ ಎಂದು ಟ್ವೀಟ್ ಮೂಲಕ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.  ಮೊನ್ನೆ ಅವರು ಬಸವಕಲ್ಯಾಣ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಮೊನ್ನೆ ಪ್ರಚಾರ ನಡೆಸಿದ್ದರು. ನಂತರ ಜ್ವರ, ಶೀತ ಕಂಡುಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡಾಗ ಸೋಂಕು ಪತ್ತೆಯಾಗಿದೆ. ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಸದ್ಯ ಕುಮಾರಸ್ವಾಮಿಯವರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ. 









































































































error: Content is protected !!
Scroll to Top