ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಸಿವಿಲ್) (ಮಹಿಳಾ ಮತ್ತು ಪುರುಷ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಶುಲ್ಕ:
ಸಾಮಾನ್ಯ/ಪ್ರವರ್ಗ 2ಎ/2ಬಿ/3ಎ/3ಬಿ/ಗೆ ಸೇರಿದ ಅಭ್ಯರ್ಥಿಗಳಿಗೆ ರೂ.500/-
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1 ಕ್ಕೆ ಸೇರಿಸ ಅಭ್ಯರ್ಥಿಗಳಿಗೆ ರೂ.250/-
ನಿಗದಿತ ಶುಲ್ಕವನ್ನು ನಗದು / ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಚೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ
ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್‌ನ ‘ಅಭ್ಯರ್ಥಿ ಪ್ರ್ರತಿ’ಯನ್ನು ಇಟ್ಟುಕೊಂಡಿರತಕ್ಕದ್ದು.
ಪ್ರಮುಖ ದಿನಾಂಕಗಳ ಮಾಹಿತಿ:

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01.04.2021 ಬೆಳಿಗ್ಗೆ 10.00 ಗಂಟೆಗೆ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03.05.2021 ಸಂಜೆ 06.00 ಗಂಟೆಗೆ
  • ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ: 05.05.2021.

ವಯೋಮಿತಿ :
ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 03.05.2021 ಕ್ಕೆ ಅಭ್ಯರ್ಥಿಗೆ ಕನಿಷ್ಟ 21
ವರ್ಷ ವಯಸ್ಸಾಗಿರಬೇಕು. ಈ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 32 ವರ್ಷಗಳು.
ಬಿ) ಇತರೆ ಅಭ್ಯರ್ಥಿಗಳಿಗೆ 30 ವರ್ಷಗಳು.
ಸೇವಾನಿರತ ಅಭ್ಯರ್ಥಿಗಳಿಗೆ:
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳು.
ಬಿ) ಇತರೆ ಅಭ್ಯರ್ಥಿಗಳಿಗೆ 35 ವರ್ಷಗಳು.

  • ಸೇವಾನಿರತ ಅಭ್ಯರ್ಥಿ:
    ಪೊಲೀಸ್ ಇಲಾಖೆಯ ಯಾವುದೇ ವೃಂದದಲ್ಲಿ ಸಹಾಯಕ ಪೊಲೀಸ್ ಸಬ್‌ಇನ್ ಪೆಕ್ಟರ್ /ಹೆಡ್ ಕಾನ್ಸ್‌ಟೇಬಲ್ / ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕನಿಷ್ಟ 5 ವರ್ಷಗಳ ಸೇವೆಯನ್ನು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅಂದರೆ 03.05.2021ಕ್ಕೆ ಪೂರ್ಣಗೊಳಿಸಿರಬೇಕು ಹಾಗೂ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಲ್ಲಿನ ಮೇಲ್ಕಂಡ ವೃಂದಗಳಲ್ಲಿ ಸೇವೆ ಸಲ್ಲಿಸುತ್ತಿರಬೇಕು.
    ಮಾಜಿ ಸೈನಿಕ ಅಭ್ಯರ್ಥಿಗಳಿಗೆ:
    ಮಾಜಿ ಸೈನಿಕ ಅಭ್ಯರ್ಥಿಯು ಸೈನ್ಯ ವಿಯೋಜನೆ, ಸೇವೆಯಿಂದ ತೆಗೆದುಹಾಕಿದ ಹಾಗೂ ಸೇವಾ ನಿವೃತ್ತಿ ಹೊಂದಿದ
    ಕಾರಣದಿಂದ ಬಿಡುಗಡೆಯಾದ ಮಾಜಿ ಯೋಧರಾಗಿದ್ದಲ್ಲಿ ಅವರು ಸೇವೆ ಸಲ್ಲಿಸಿದ ಅವಧಿಯ ಜೊತೆಗೆ ಹೆಚ್ಚುವರಿ 03 ವರ್ಷಗಳ ರಿಯಾಯಿತಿಗಳನ್ನು ನೀಡಲಾಗುವುದು. ಮಾಜಿ ಯೋಧ ಎಂಬ ಶಬ್ದವು ಚಾಲ್ತಿಯಲ್ಲಿರುವ ಸಂಬಂಧಿಸಿದ ನಿಯಮಾವಳಿಗಳಲ್ಲಿನ ಪರಿಭಾಷೆಯ ಅರ್ಥ ಹೊಂದಿದೆ.

ವಿದ್ಯಾರ್ಹತೆ:
ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ
ಪದವಿಯನ್ನು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 03.05.2021ಕ್ಕೆ ಹೊಂದಿರಬೇಕು. (ಮಾಜಿ ಸೈನಿಕ
ಅಭ್ಯರ್ಥಿಗಳು ಸೈನ್ಯದಲ್ಲಿ ನೀಡಿದ ಪದವಿ ಪ್ರಮಾಣ ಪತ್ರವನ್ನು ದಿನಾಂಕ: 03.05.2021 ರೊಳಗೆ ಪಡೆದಿದ್ದರೆ ಅಂತಹ
ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಪರಿಗಣಿಸಲಾಗುವುದು).



































error: Content is protected !!
Scroll to Top