ಮಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಲ ದೃಷ್ಟಿಯಿಂದ ರಾಜ್ಯ ಸರಕಾರ ಜಾರಿಗೊಳಿಸಿದ ನಿಯಮಗಳ ಹಿನ್ನಲೆಯಲ್ಲಿ ಇಂದಿನಿಂದ (ಎ.21) ರಿಂದ ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳನ್ನು ಮುಂದೂಡಿ ವಿಶ್ವವಿದ್ಯಾನಿಲಯ ಆದೇಶ ಹೊರಡಿಸಿದೆ.
ಈಗಾಗಲೇ ಎರಡು ಪರೀಕ್ಷೆಗಳು ಮುಂದೂಡಿಕೆಯಾಗಿದ್ದು, ಇಂದಿನಿಂದನಡೆಯುವ ಪರೀಕ್ಷೆಗಳನ್ನು ರದ್ದು ಮಾಡಿದೆ.
ಮುಂದಿನ ದಿನಗಳಲ್ಲಿ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ವಿಶ್ವವಿದ್ಯಾನಿಲಯದ ಅಧಿಕಾರಿಗಳು ತಿಳಿಸಿದ್ದಾರೆ.




















