ಕಾರ್ಕಳ ಸರಕಾರಿ ಆಸ್ಪತ್ರೆಗೆ ಶಾಸಕ ಸುನಿಲ್ ಕುಮಾರ್ ದಿಢೀರ್ ಭೇಟಿ
ಕಾರ್ಕಳ : ಶಾಸಕ ವಿ. ಸುನಿಲ್ ಕುಮಾರ್ ಅವರು ಬುಧವಾರ ಬೆಳಿಗ್ಗೆ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಿಡೀರ್ ಆಗಿ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ಕುರಿತು ಪರಿಶೀಲಿಸಿದರು. ಕೋವಿಡ್ 2ನೇ ಅಲೆ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ನಿರ್ವಹಿಸುವಂತೆ ಮತ್ತು ದಿನದ 24 ಗಂಟೆಯೂ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ ಅಲ್ಲದೇ ಇತರ ಖಾಯಿಲೆಗೆ ಚಿಕಿತ್ಸೆ ಪಡೆಯಲು ಬರುವ ರೋಗಿಗಳಿಗೂ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆಯೂ ತಿಳಿಸಿದರು.
50 ಆಕ್ಸಿಜನ್ ಬೆಡ್‌ಗೆ ವ್ಯವಸ್ಥೆ
ಸರಕಾರಿ ಆಸ್ಪತ್ರೆಗೆ ಹೆಚ್ಚುವರಿಯಾಗಿ ವೈದ್ಯರು, ನರ್ಸ್ ಹಾಗೂ ಇನ್ನಿತರ ಸಿಬ್ಬಂದಿ ನೇಮಕಕ್ಕೆ ಸರಕಾರ ಮಟ್ಟದಲ್ಲಿ ಮಾತುಕತೆ ನಡೆಸುತ್ತೇನೆ. ಒಂದು ವಾರದೊಳಗೆ ಕಾರ್ಕಳದಲ್ಲಿ 50 ಆಕ್ಸಿಜನ್ ವ್ಯವಸ್ಥೆಯ ಬೆಡ್ ಇರುವ ಕೋವಿಡ್ ವಿಭಾಗ ಆರಂಭಿಸಲು ಬೇಕಾದಂತಹ ಅನುದಾನ ಬಿಡುಗಡೆಗೊಳಿಸಲಾಗುವುದು ಎಂದು ಶಾಸಕರು ತಿಳಿಸಿದರು.
















