ಭಾರತದಲ್ಲಿ ಕೊರೋನಾ ಅಟ್ಟಹಾಸ: ದೇಶದಲ್ಲಿಂದು 3.23 ಲಕ್ಷ ಸೋಂಕಿತರು ಪತ್ತೆ, 2,771 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಆಟಾಟೋಪ ಆತಂಕಕಾರಿಯಾಗಿ ಮುಂದುವರೆಸಿದ್ದು, ದೇಶದಲ್ಲಿಂದು 3,23,144 ಹೊಸ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,76,36,307ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2771 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,97,894ಕ್ಕೆ ಏರಿಕೆಯಾಗಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 28,82,204ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,51,827 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,45,56,209ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 16,58,700 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 28,09,79,877 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 14,52,71,186 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

























error: Content is protected !!
Scroll to Top