ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನಿರ್ದೇಶಕರಾಗಿ ಜಿತೇಂದ್ರ ಕುಂದೇಶ್ವರ ಆಯ್ಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಸ್ತುವಾರಿಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ’ದ ನೂತನ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಶ್ವವಾಣಿಯ ವಿಶೇಷ ವರದಿಗಾರ ಹಿರ್ಗಾನದ ಜಿತೇಂದ್ರ ಕುಂದೇಶ್ವರ ಆಯ್ಕೆಯಾಗಿದ್ದಾರೆ.
ಮಂಗಳೂರಿನ ಪತ್ರಿಕಾ ಭವನದಲ್ಲಿ ಎ. 27ರಂದು ನಡೆದ ಚುನಾವಣೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ. ಕುಂದೇಶ್ವರ ದೇವಸ್ಥಾನದ ಆನುವಂಶಿಕ ಅರ್ಚಕರೂ, ಧರ್ಮದರ್ಶಿಗಳೂ ಆಗಿರುವ ಜಿತೇಂದ್ರ ಕುಂದೇಶ್ವರ ಕಾರ್ಕಳ‌ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಜಿಲ್ಲಾ ಕೇಂದ್ರ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿರುತ್ತಾರೆ.

































error: Content is protected !!
Scroll to Top