ಕಾರ್ಕಳ : ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ಸುಧೀರ್ ಕುಮಾರ್ (39) ಭಾನುವಾರ ಮೃತಪಟ್ಟಿದ್ದಾರೆ. ಎರಡು ವಾರಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಉಜಿರೆ ಆಸ್ಪತ್ರೆಗೆ ದಾಖಲಾಗಿದ್ದ ಇವರನ್ನು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಲತಃ ಬೆಳ್ತಂಗಡಿಯವರಾಗಿದ್ದ ಸುಧೀರ್ 2012ರಿಂದ ಮಿಯ್ಯಾರು ಹೈಸ್ಕೂಲ್ನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಮೊರಾರ್ಜಿ ವಸತಿ ಶಾಲಾ ಪ್ರವೇಶಾತಿಯಲ್ಲಿ ತಾಲೂಕಿನ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ದೊರಕಿಸಿಕೊಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳೊಂದಿಗೆ ನಿರಂತರವಾಗಿ ಶ್ರಮಿಸಿದ್ದ ಸುಧೀರ್ ಶಾಲಾ ಅಭಿವೃದ್ದಿಯಲ್ಲೂ ಸಾಕಷ್ಟು ಕೊಡುಗೆ ನೀಡಿದ್ದರು. ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದ ಇವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
Recent Comments
ಕಗ್ಗದ ಸಂದೇಶ
on
We didn’t imagine ur death sir😓😓