Tuesday, August 3, 2021
spot_img
Homeಜಿಲ್ಲಾಮಂಗಳೂರು: ಅಕ್ರಮವಾಗಿ ನುಸುಳಿದ್ದ ಶ್ರೀಲಂಕಾ ಪ್ರಜೆಗಳ ಬಂಧನ

ಮಂಗಳೂರು: ಅಕ್ರಮವಾಗಿ ನುಸುಳಿದ್ದ ಶ್ರೀಲಂಕಾ ಪ್ರಜೆಗಳ ಬಂಧನ

ಮಂಗಳೂರು: ಶ್ರೀಲಂಕಾದಿಂದ ಕೆನಾಡಾಗೆ ಮಾನವ ಕಳ್ಳ ಸಾಗಣೆ ಮಾಡುತಿದ್ದ ಜಾಲವನ್ನು ಪತ್ತೆಹಚ್ಚಿ 38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಮಂಗಳೂರು ಕಮಿಷನರ್‌ ಶಶಿಕುಮಾರ್‌ ತಿಳಿಸಿದ್ದಾರೆ.
ಮಾರ್ಚ್‌ನಲ್ಲಿ ಶ್ರೀಲಂಕಾದಿಂದ 39 ಪ್ರಜೆಗಳು ಪ್ರಯಾಣಿಸಿದ್ದು, ಪ್ರತಿಯೊಬ್ಬರಿಂದ ಏಜೆಂಟ್‌ನೊಬ್ಬ 5 ಲಕ್ಷದಿಂದ 10 ಲಕ್ಷದವರೆಗೆ ಹಣವನ್ನು ಪಡೆದುಕೊಂಡು ಕೆನಡಾ ದೇಶಕ್ಕೆ ಕಳುಹಿಸಲು ಯೋಜನೆ ರೂಪಿಸಿ ದೋಣಿಯ ಮುಖಾಂತರ ತಮಿಳುನಾಡು ರಾಜ್ಯದ ತೂತುಕುಡಿಗೆ ಕಳುಹಿಸಿದ್ದ ಎನ್ನಲಾಗಿದೆ. ತಮಿಳುನಾಡಿನಲ್ಲಿ ಚುನಾವಣೆ ಹಿನ್ನಲೆ ಬೆಂಗಳೂರಿಗೆ ಕಳುಹಿಸಲಾಗಿದೆ.
ಹೀಗೆ ಬಂದ 39 ಮಂದಿ ಮಂಗಳೂರಿನ ಲಾಡ್ಜ್‌ ಮತ್ತು ಬಾಡಿಗೆ ಮನೆಯಲ್ಲಿ ವಾಸವಿದ್ದರು. ಕಳೆ ಒಂದು ತಿಂಗಳಿನಿಂದ ಅಕ್ರಮವಾಗಿ ವಾಸವಿದ್ದ 38 ಶ್ರೀಲಂಕಾ ಪ್ರಜೆಗಳನ್ನು ಬಂಧಿಸಲಾಗಿದ್ದು ಇನ್ನೋರ್ವನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!