Saturday, December 4, 2021
spot_img
HomeUncategorizedಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆ: ಬಿಸಿಸಿಐ ಕಾರ್ಯದರ್ಶಿ ಜಯ್...

ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆ: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ

ನವದೆಹಲಿ: ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರು ಆಯ್ಕೆಯಾಗಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.

ಇಂಗ್ಲೆಂಡ್ ನಲ್ಲಿ ಭಾರತ ಹಿರಿಯ ತಂಡ ನ್ಯೂಜಿಲೆಂಡ್ ವಿರುದ್ಧ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ಆಡುತ್ತಿದ್ದು, ಅದೇ ಹೊತ್ತಿನಲ್ಲೇ ಶ್ರೀಲಂಕಾ ಪ್ರವಾಸ ಕೂಡ ಆರಂಭವಾಗಿದೆ. ಹೀಗಾಗಿ ಇಂಗ್ಲೆಂಡ್ ನಲ್ಲಿರುವ ಹಿರಿಯ ತಂಡಕ್ಕೆ ಪ್ರಧಾನ ಕೋಚ್ ರವಿಶಾಸ್ತ್ರಿ ಮಾರ್ಗದರ್ಶನ  ದೊರೆಯಲಿದ್ದು, ಲಂಕಾ ಪ್ರವಾಸ ಕೈಗೊಳ್ಳುವ ಶಿಖರ್ ಧವನ್ ನೇತೃತ್ವತದ ತಂಡಕ್ಕೆ ಕ್ರಿಕೆಟ್ ದಂತಕಥೆ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಕೋಚಿಂಗ್ ಮಾಡಲಿದ್ದಾರೆ.

ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಾಹಿತಿ ನೀಡಿದ್ದು, ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡದ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರು ತೆರಳಲಿದ್ದಾರೆ ಎಂದು ಸುದ್ದಿಸಂಸ್ಥೆಯೊಂದಿಗೆ ಮಾಹಿತಿ ನೀಡಿದ್ದಾರೆ.

ಹಾಲಿ ಮುಖ್ಯ ಕೋಚ್ ರವಿ ಶಾಸ್ತ್ರಿ, ಸಹಾಯಕ ಕೋಚ್ ಗಳಾದ ಭರತ್ ಅರುಣ್, ವಿಕ್ರಮ್ ರಾಥೋಡ್ ಅವರು ಇಂಗ್ಲೆಂಡ್ ಪ್ರವಾಸದಲ್ಲಿರುವ ಕಾರಣ ರಾಹುಲ್ ದ್ರಾವಿಡ್ ಯುವ ತಂಡಕ್ಕೆ ಮಾರ್ಗದರ್ಶನವನ್ನು ನೀಡಲಿದ್ದಾರೆ. ಈ ಹಿಂದೆ 2014ರಲ್ಲಿಯೂ ರಾಹುಲ್ ದ್ರಾವಿಡ್ ಪ್ರಧಾನ ಕೋಚ್  ಅನುಪಸ್ಥಿತಿಯಲ್ಲಿ ಭಾರತ ತಂಡಕ್ಕೆ ಮಾರ್ಗದರ್ಶನ ನೀಡಿದ್ದರು. ಸದ್ಯ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿದ್ದಾರೆ. ಇದರ ಜೊತೆಗೆ ಅಂಡರ್ 19 ಹಾಗೂ ಭಾರತ ಎ ತಂಡಗಳ ಪ್ರಗತಿಯ ಮೇಲ್ವಿಚಾರಣೆಯನ್ನು ಕೂಡ ನಡೆಸುತ್ತಿದ್ದಾರೆ.

ಮುಂದಿನ ಜುಲೈ ತಿಂಗಳಿನಲ್ಲಿ ಶ್ರೀಲಂಕಾ ವಿರುದ್ಧ ನಡೆಯುವ ಸೀಮಿತ ಓವರ್‌ಗಳ ಸರಣಿಯಲ್ಲಿ ಟೀಮ್ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್ ಆಗಿ ಕರ್ತವ್ಯವನ್ನು ನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅಧಿಕೃತವಾಗಿ ಘೋಷಿಸಿದ್ದಾರೆ. 

ಶ್ರೀಲಂಕಾ ವಿರುದ್ಧದ ಮೂರು ಅಂತಾರಾಷ್ಟ್ರೀಯ ಏಕದಿನ ಪಂದ್ಯಕ್ಕಾಗಿ ಸಿದ್ದತೆಯಲ್ಲಿ ತೊಡಗಿರುವ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ, ಸೋಮವಾರದಿಂದ ಭಾರತದಲ್ಲಿ 14 ದಿನಗಳ ಕ್ವಾರಂಟೈನ್ ಗೆ ಒಳಪಡಲಿದೆ. ಸೋಮವಾರ ಸೇರಲಿರುವ ಟೀಂ ಇಂಡಿಯಾ ಆಟಗಾರರು ಏಳು ದಿನಗಳ ಕಠಿಣ ಕ್ವಾರಂಟೈನ್ ಹಾಗೂ ಒಳಾಂಗಣ ತರಬೇತಿಯೊಂದಿಗೆ ಏಳು ದಿನಗಳ ಸಾಧಾರಣಾ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ. ಜೂನ್ 28 ರಂದು ಟೀಂ ಇಂಡಿಯಾ ಕೊಲಂಬೊಕ್ಕೆ ಪ್ರಯಾಣ ಬೆಳೆಸಲಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!